ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮ ವಹಿಸಿ

KannadaprabhaNewsNetwork |  
Published : Jan 22, 2025, 12:30 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ ಮಾತನಾಡಿದರು. | Kannada Prabha

ಸಾರಾಂಶ

ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜತೆಗೆ ನಿಗದಿಪಡಿಸಿದ ದಾಖಲಾತಿ ಸಮೇತ ಸ್ವೀಕರಿಸಬೇಕು

ಗದಗ: ಸಕಾಲ ಯೋಜನೆಯಡಿ ಸ್ವೀಕರಿಸಲಾದ ಅರ್ಜಿ ನಿಗದಿತ ಅವಧಿಯಲಿಯೇ ವಿಲೇವಾರಿ ಮಾಡುವಂತೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕಾಲ ಯೋಜನೆಯ ಜಿಲ್ಲಾಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜತೆಗೆ ನಿಗದಿಪಡಿಸಿದ ದಾಖಲಾತಿ ಸಮೇತ ಸ್ವೀಕರಿಸಬೇಕು. ಸಕಾಲ ಯೋಜನೆಯಡಿ ಇಲಾಖೆಗಳಿಗೆ ನಿಗದಿಪಡಿಸಿದ ಯೋಜನೆಗಳಲ್ಲಿ ಕಡ್ಡಾಯವಾಗಿ ಅರ್ಜಿ ಸ್ವೀಕರಿಸಬೇಕು. ಕೆಲವು ತಾಂತ್ರಿಕ ತೊಂದರೆ ಉಂಟಾದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸುವ ಉದ್ದೇಶಕ್ಕಾಗಿಯೇ ಸಕಾಲ ಯೋಜನೆ ಜಾರಿಗೊಳಿಸಲಾಗಿದ್ದು, ಈ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಯೋಜನೆ ಯಶಸ್ವಿಗೊಳಿಸಬೇಕು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿ ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ. ಸಕಾಲ ಯೋಜನೆಯ ಜಿಲ್ಲಾಮಟ್ಟದ ಸಭೆಗೆ ಅಧಿಕಾರಿಗಳು ತಪ್ಪದೇ ಹಾಜರಾಗಬೇಕು. ಸಮಾಜ ಕಲ್ಯಾಣ, ನಗರಸಭೆ, ಕೆ.ಎಸ್.ಆರ್.ಟಿ.ಸಿ ಸೇರಿದಂತೆ ವಿವಿಧ ಇಲಾಖೆ ಸಕಾಲ ಯೋಜನೆಯ ಅರ್ಜಿಗಳ ವಿಳಂಬ ತಪ್ಪಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ. ಎಂ ಮಾತನಾಡಿ, ಇಲಾಖೆಯ ಅಧಿಕಾರಿಗಳು ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಭರತ್.ಎಸ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ : ಪತ್ರಕರ್ತ ಶರತ್‌ ವಶ
ಪೊಲೀಸ್ ವಾಹನದಲ್ಲಿ ಕುಡುಕರು ಮನೆಗೆ : ವ್ಯವಸ್ಥೆಗೆ ಆಕ್ಷೇಪ