ದೌರ್ಜನ್ಯ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮಕೈಗೊಳ್ಳಿ

KannadaprabhaNewsNetwork |  
Published : Jul 04, 2025, 11:54 PM IST
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ನಡೆಯಿತು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ದೌರ್ಜನ್ಯ ಪ್ರಕರಣಗಳಲ್ಲಿ ಸಕಾಲದಲ್ಲಿ ತ್ವರಿತ ಪರಿಹಾರ ಒದಗಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸೂಚನೆ ನೀಡಿದರು. ಅರ್ಹ ಫಲಾನುಭವಿಗಳು ಪಹಣಿ ಪತ್ರ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಿಂದ ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿ, ತಹಸೀಲ್ದಾರ್‌ರಿಗೆ ಸಲ್ಲಿಸಿ, ಪಹಣಿಪತ್ರ ಸಿದ್ದಪಡಿಸಲು ಸಹಕರಿಸಬೇಕು. ಡಾ.ಬಿ.ಆರ್.ಅಂಬೇಡ್ಕರ ವೃತ್ತ ನಿರ್ಮಾಣಕ್ಕೆ ಸ್ಥಳಾವಕಾಶ ಕುರಿತು ಸದಸ್ಯರಾದ ಯಮನಪ್ಪ ಸಿದರಡ್ಡಿ ಮಾಡಿದ ಮನವಿ ಆಲಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ, ವರದಿ ಸಲ್ಲಿಸಲು ಸೂಚಿಸಿದರು.

ಭೂ ಒಡೆತನ ಯೋಜನೆಯಡಿ ಖರೀದಿಯಾದ ಜಮೀನುಗಳಿಗೆ ಆರ್‌ಟಿಸಿ ಹಾಗೂ ಪಹಣಿ ಬದಲಾವಣೆ ಅರ್ಹ ಫಲಾನುಭವಿಗಳಿಗೆ ತೊಂದರೆ ತಪ್ಪಿಸಿ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಕ್ರೂಢೀಕರಿಸಿಕೊಂಡು ಅರ್ಹ ಫಲಾನುಭವಿಗಳಿಗೆ ಅನುಕೂಲವಾಗಲು ಕ್ರಮವಹಿಸಬೇಕು. ಈ ಯೋಜನೆಯಡಿ ಇಲ್ಲಿಯವರೆಗೆ ಸ್ವೀಕರಿಸಿದ ಅರ್ಜಿ ಹಾಗೂ ಇತ್ಯರ್ಥಗೊಳಿಸಿದ್ದ ಕುರಿತ ಪಟ್ಟಿ ನೀಡುವಂತೆ ಹೇಳಿದರು. ಸಮಾಜ ಕಲ್ಯಾಣ ಇಲಾಖೆಯು ಪ್ರಗತಿಯ ಕುರಿತು ಆಗಾಗ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಬೇಕು. ಈಗಾಗಲೇ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸುವಂತೆ, ಸ್ಮಶಾನದ ಜಾಗ ಒತ್ತುವರಿ, ಮಹರ್ಷಿ ವಾಲ್ಮಿಕಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ಸಮಿತಿ ಸದಸ್ಯರ ಮನವಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಸಮಿತಿ ಸದಸ್ಯ ಅಭಿಷೇಕ ಚಕ್ರವರ್ತಿ ಮಾತನಾಡಿ, ಜಿಲ್ಲೆಯಲ್ಲಿ ಜಾತಿ ನಿಂದನೆ, ದೌರ್ಜನ್ಯ ನಿಂದನೆ ಪ್ರಕರಣಗಳು ದಾಖಲಾಗದಂತೆ ಸೂಕ್ತ ಜಾಗೃತಿ ಮೂಡಿಸಬೇಕು. ಈಗಾಗಲೇ ದಾಖಲಾಗಿರುವ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥಗೊಳಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಪ್ರತಿ ತಿಂಗಳು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಕುಂದು ಕೊರತೆ ದೌರ್ಜನ್ಯ ಪರಿಹಾರ ಕುರಿತು ಸಭೆಗಳನ್ನು ಏರ್ಪಡಿಸಲಾಗುತ್ತಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ವತಿಯಿಂದ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಸಹಾಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಹೇಮಲತಾ ವಸ್ತ್ರದ, ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗಗಳ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ರಾಜಶೇಖರ ಚೌರ, ಸೋಮಲು ಲಮಾಣಿ, ಮಹಾಂತೇಶ ಸಾಸಬಾಳ, ಬಂದಗಿ ಸಿದ್ದಪ್ಪ ಗಸ್ತಿ, ಮದನಕುಮಾರ ನಾಗರದಿನ್ನಿ, ರವಿಕಾಂತ ಬಿರಾದಾರ, ಯಮನಪ್ಪ ಸಿದರಡ್ಡಿ, ಸಿದ್ದು ರಾಯಣ್ಣವರ, ಮಲ್ಲು ತಳವಾರ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಯೋಗೇಶ್ವರ್‌
ಕೋಗಿಲು ಕ್ರಾಸ್‌ ಸಂತ್ರಸ್ತರಲ್ಲಿ 26 ಮಂದಿ ಬಳಿಯಷ್ಟೇ ಸೂಕ್ತ ದಾಖಲೆ