ಕುಡಿಯವ ನೀರಿನ ಯೋಜನೆಗೆ ಕ್ರಮ ಕೈಗೊಳ್ಳಿ: ಎನ್.ಹೇಮಂತ್‌

KannadaprabhaNewsNetwork |  
Published : Feb 17, 2025, 12:34 AM IST
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್. ಹೇಮಂತ್ | Kannada Prabha

ಸಾರಾಂಶ

ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಗುದ್ದಲಿಪೂಜೆ ಹಾಗೂ ಉದ್ಘಾಟನೆ ಕಾರ್ಯ ನೆರವೇರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಹೇಮಂತ್‌ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ರಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಅಧಿಕಾರಿ ಸೂಚನೆ

ಭದ್ರಾವತಿ: ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಗುದ್ದಲಿಪೂಜೆ ಹಾಗೂ ಉದ್ಘಾಟನೆ ಕಾರ್ಯ ನೆರವೇರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಹೇಮಂತ್‌ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ರಿಗೆ ಸೂಚಿಸಿದ್ದಾರೆ.

ಕಳೆದ ಸುಮಾರು ೧ ತಿಂಗಳ ಹಿಂದೆ ಜನ್ನಾಪುರ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್‌ರವರ ನೇತೃತ್ವದಲ್ಲಿ ಮನವಿ ಸಲ್ಲಿಸಿ, ತಾಲೂಕಿನ ಗ್ರಾಮಾಂತರ ವ್ಯಾಪ್ತಿಯ ಉಂಬ್ಳೆಬೈಲು ಹಾಗೂ ಕಲ್ಲಹಳ್ಳಿ ಗ್ರಾ ಪಂಚಾಯಿತಿ ಮತ್ತು ೨೮ ಹಳ್ಳಿಗಳಲ್ಲಿ ಹಾಗೂ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೩ ಹಳ್ಳಿಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಕೈಗೆತ್ತಿಕೊಳ್ಳಲು, ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಲಾಗಿತ್ತು.

ಇದಕ್ಕೆ ಸ್ಪಂದಿಸಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರು ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?