ಅರ್ಹ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಿ: ಡಾ. ಕೆ. ವಿದ್ಯಾಕುಮಾರಿ

KannadaprabhaNewsNetwork |  
Published : Aug 09, 2024, 12:48 AM IST
ಡಿಸಿ7 | Kannada Prabha

ಸಾರಾಂಶ

ಪ್ರಸ್ತುತ ಲಭ್ಯವಿರುವ ನಿವೇಶನ ಹಕ್ಕುಪತ್ರವನ್ನು ವಿತರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಜಿಲ್ಲೆಯ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬುಧವಾರ ಇಲ್ಲಿನ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ, ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕುಪತ್ರಗಳನ್ನು ವಿತರಣೆ ಮಾಡಬೇಕು ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿವಿಧ ಗ್ರಾಮ ಪಂಚಾಯತ್‌ನಲ್ಲಿ ನಿವೇಶನ ಕೋರಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಯಿರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯವಿರುವ ಜಮೀನನ್ನು ಗುರುತಿಸುವ ಕಾರ್ಯವನ್ನು ತಹಸೀಲ್ದಾರರು ಮತ್ತು ಕಾರ್ಯನಿರ್ವಹಣಾಧಿಕಾರಿಗಳು ಸಮನ್ವಯದೊಂದಿಗೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ಭೂಮಿ ನೀಡಲು ಕಾಯ್ದಿರಿಸುವ ಜಮೀನಿನ ಸರ್ವೇ ಕಾರ್ಯಗಳನ್ನು ಆದಷ್ಟು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಅವುಗಳನ್ನು ನಿವೇಶನವಾಗಿ ಪರಿವರ್ತಿಸುವ ಕಾರ್ಯಗಳನ್ನು ಅಧಿಕಾರಿಗಳು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

ನಿವೇಶನ ಬೇಡಿಕೆಯಿರುವ ಗ್ರಾ.ಪಂ. ವ್ಯಾಪ್ತಿಯಲ್ಲಿ ಭೂಮಿ ಲಭ್ಯವಿಲ್ಲದೇ ಇದ್ದಲ್ಲಿ, ಸಮೀಪದ ಇತರೆ ನೆರೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಗುರುತಿಸಿ, ನಿವೇಶನ ಹಂಚಿಕೆಗೆ ಕಾಯ್ದಿರಿಸಬೇಕು ಎಂದರು.

ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತ ಫಲಾನುಭವಿಗಳನ್ನು ಗುರುತಿಸದೇ ಇದ್ದಲ್ಲಿ, ಅಂತಹ ಗ್ರಾಮ ಪಂಚಾಯಿತಿಯು ಒಂದು ತಿಂಗಳ ಒಳಗಾಗಿ ಅರ್ಹ ಫಲಾನುಭವಿಗಳನ್ನು ನಿಯಮಾನುಸಾರ ಆಯ್ಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಯೋಜನಾ ನಿರ್ದೇಶಕ ಪ್ರಶಾಂತ್ ರಾವ್, ಎಲ್ಲ ತಾಲೂಕಿನ ತಹಸೀಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ