ರೋಣ: ಪ್ರಸ್ತುತ ಆರ್ಥಿಕ ವರ್ಷ ಅಂತ್ಯದ ಹಂತದಲ್ಲಿರುವುದರಿಂದ ಯಾವುದೇ ಯೋಜನೆಯ ಅನುದಾನ ವ್ಯಯವಾಗದೆ ಉಳಿಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಪಂ ಆಡಳಿತಾಧಿಕಾರಿ ನಂದಾ ಹಣಬರಟ್ಟಿ ತಿಳಿಸಿದರು.
ಭೂಸೇನಾ ನಿಗಮದ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳು ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವುದನ್ನು ಉಲ್ಲೇಖಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸಭೆಯಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ, ತಾಪಂ ವ್ಯವಸ್ಥಾಪಕ ದೇವರಾಜ ಸಜ್ಜನಶೆಟ್ಟರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಕಾಮಗಾರಿ ಪರಿಶೀಲನೆ: ಸಭೆ ಬಳಿಕ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ಸರ್ಕಾರಿ ಈಜುಕೊಳವನ್ನು ತಾಪಂ ಆಡಳಿತಾಧಿಕಾರಿ ನಂದಾ ಹಣಬರಟ್ಟಿ ಪರಿಶೀಲನೆ ನಡೆಸಿ ಶೀಘ್ರವಾಗಿ ಕಾಮಗಾರಿ ಮುಗಿಸಲು ಸೂಚಿಸಿದರು. ಬಳಿಕ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಸ್ಪೆಷಲ್ ಕ್ಲಾಸ್ ತಗೆದುಕೊಳ್ಳಲು ಶಿಕ್ಷಕರಿಗೆ ತಿಳಿಸಿದರು.ಪ್ರತ್ಯೇಕ ಅಪಘಾತ: ಬೈಕ್ ಸವಾರ ಸಾವುಲಕ್ಷ್ಮೇಶ್ವರ: ತಾಲೂಕಿನ ವಿವಿಧೆಡೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸಾವಿಗೀಡಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.ಸಮೀಪದ ರಾಮಗೇರಿ ಗ್ರಾಮದ ಹತ್ತಿರ ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮಹಾಂತೇಶ ತಿರಕಪ್ಪ ಯಲಗಚ್ಚ(31) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿಯ ಸವಾರ ಮುದಕಪ್ಪ ಮಾರ್ತಾಂಡಪ್ಪ ಗಂಜಿಗಟ್ಟಿ(35) ಎಂಬುವವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.ಗಾಯಗೊಂಡಿರುವ ಮುದುಕಪ್ಪ ಗಂಜಿಗಟ್ಟಿ ಅವರನ್ನು ಗದಗ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ರಾಮಗೇರಿ ಗ್ರಾಮದ ಯುವಕರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಊರಿಗೆ ವಾಪಸ್ ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದೆ.