ಮತ ಎಣಿಕೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಿ

KannadaprabhaNewsNetwork |  
Published : May 24, 2024, 12:56 AM IST
23ಕೆಎಂಎನ್ ಡಿ19,20 | Kannada Prabha

ಸಾರಾಂಶ

ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ. ಉತ್ತಮ ರೀತಿಯಲ್ಲಿ ತರಬೇತಿ ಪಡೆದು ಯಾವುದೇ ಲೋಪದೋಷವಿಲ್ಲದೇ ಮತ ಎಣಿಕೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಇವಿಎಂ ಮತ ಎಣಿಕೆ ಸಿಬ್ಬಂದಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಜೂನ್ 4 ರಂದು ನಡೆಯಲಿದೆ. ಉತ್ತಮ ರೀತಿಯಲ್ಲಿ ತರಬೇತಿ ಪಡೆದು ಯಾವುದೇ ಲೋಪದೋಷವಿಲ್ಲದೇ ಮತ ಎಣಿಕೆ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಇವಿಎಂ ಮತ ಎಣಿಕೆ ಸಿಬ್ಬಂದಿಗೆ ಸೂಚಿಸಿದರು.

ನಗರದ ಡಾ.ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಇವಿಎಂ ಮತ ಎಣಿಕೆ ಸಿಬ್ಬಂದಿಗೆ ಆಯೋಜಿಸಿದ್ದ ಚುನಾವಣಾ ತರಬೇತಿಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಮತದಾನ ಕಾರ್ಯಗಳಿಗೆ ಸಂಬಂಧಿಸಿದಂತೆ ನೇಮಕಗೊಂಡಿದ್ದ ಸೆಕ್ಟರ್ ಅಧಿಕಾರಿಗಳು, ಎಆರ್ ಒ ಗಳು, ಪಿಆರ್ ಒಗಳು, ಮಾಸ್ಟರ್ ಟ್ರೇನರ್ ಗಳನ್ನೇ ಮತ ಎಣಿಕೆ ಸಿಬ್ಬಂದಿಯಾಗಿ ನೇಮಕ ಮಾಡಲಾಗಿದೆ. ಎಲ್ಲಾ ಮತ ಎಣಿಕೆ ಸಿಬ್ಬಂದಿಗೂ ಇವಿಎಂ ಬಳಕೆಯ ಅನುಭವವಿರುವುದರಿಂದ ಭಯ ಪಡದೆ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಕಾರ್ಯ ನಿರ್ವಹಿಸಿ ಎಂದರು.

ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿ ನಿಗದಿಪಡಿಸುವ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಮತ ಎಣಿಕೆ ಕೊಠಡಿಗೆ ಮೊಬೈಲ್‌ಅನ್ನು ಸಂಪೂರ್ಣವಾಗಿ ನಿಷೇಧಸಲಾಗಿದೆ. ಪ್ರತಿಯೊಂದು ಟೇಬಲ್ ಗಳ ಮೇಲೂ ಸಿಸಿ. ಕ್ಯಾಮರಾ ಇದ್ದು, ಬಹಳ ಜಾಗರೂಕತೆಯಿಂದ ಮತ ಎಣಿಕೆ ನಡೆಸಿ ಎಂದರು.

ಕೆಲವು ವೇಳೆ ಇವಿಎಂಗೆ ಸಂಬಂಧಿಸಿದಂತೆ ತಾಂತ್ರಿಕಾ ತೊಂದರೆ ಉಂಟಾಗಬಹುದು. ಕ್ಲೋಸ್ ಬಟನ್ ಉಪಯೋಗಿಸಿ ಕ್ಲೋಸ್ ಮಾಡದ ಪ್ರಕರಣ ಕಂಡುಬರಬಹುದು. ಯಾವ ರೀತಿ ಕೆಲಸ ನಿರ್ವಹಿಸಬೇಕು ಎಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ ಅದನ್ನು ಅನುಸರಿಸಬೇಕು ಎಂದರು.

ಮತ ಎಣಿಕೆ ದಿನ ಸಮಸ್ಯೆ ಎದುರಾದಾಗ ಅದಕ್ಕೆ ತಹಸೀಲ್ದಾರ್ ಅಥವಾ ಸಹಾಯಕ ಚುನಾವಣಾಧಿಕಾರಿಗಳ ಬಳಿ ಪರಿಹಾರ ಪಡೆದುಕೊಳ್ಳುತ್ತೇವೆ ಎಂಬ ಮನೋಭಾವ ಇರಬಾರದು. ಮತ ಎಣಿಕೆಗೆ ನಿಯೋಜಿಸುವ ಎಜೆಂಟ್ ಗಳ ಬಳಿ ಶಾಂತವಾಗಿ ವ್ಯವಹರಿಸಬೇಕು. ಅವರಿಗೆ ಸಂಶಯಗಳಿದ್ದಲ್ಲಿ ಅವುಗಳನ್ನು ಪರಿಹರಿಸಿ ಎಂದು ಸೂಚಿಸಿದರು.ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿ ಬಹಳ ಮುಖ್ಯವಾಗಿದೆ. ಮೇಲ್ವಿಚಾರಕರು ಪ್ರತಿ ಇವಿಎಂಗಳಲ್ಲಿ ಎಣಿಕೆಯಾದ ತಕ್ಷಣ ನಿಖರ ಅಂಕಿಆಂಶಗಳನ್ನು ಬರೆದುಕೊಳ್ಳಬೇಕು. ಇದರಲ್ಲಿ ತಪ್ಪಾದರೆ ಎಣಿಕೆ ಕೆಲಸಗಳು ಕಷ್ಟಕರವಾಗುತ್ತದೆ. ಆದರಿಂದ ತರಬೇತಿ ಅವಧಿಯಲ್ಲಿ ಸ್ಪಷ್ಟ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಿರಿ. ಯಾವುದೇ ಗೊಂದಲವಿದ್ದರೂ ಇಲ್ಲಿಯೇ ಬಗೆಹರಿಸಿಕೊಳ್ಳಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಸಹಾಯಕ ಚುನಾವಣಾಧಿಕಾರಿಗಳಾದ ಮಹೇಶ್, ಆನಂದ್ ಕುಮಾರ್, ಕೃಷ್ಣ ಕುಮಾರ್, ಲೋಕನಾಥ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!