- ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲು ಸಂಸದೆ ಡಾ.ಪ್ರಭಾ ಅವರಿಗೆ ಫೆಡರೇಶನ್ ಮನವಿ
- - - - - -- ದೇಶಾದ್ಯಂತ 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಅಡುಗೆ ಸಿಬ್ಬಂದಿಯಾಗಿ ಕೆಲಸ
- ಕೆಲಸದ ಭದ್ರತೆ ಸೇರಿ ಕಾರ್ಮಿಕ ಕಾಯ್ದೆಯಡಿ ಸವಲತ್ತುಗಳ ಒದಗಿಸಲು ಒತ್ತಡ ತರಬೇಕು- - - ಕನ್ನಡಪ್ರಭ ವಾರ್ತೆ, ದಾವಣಗೆರೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಡುಗೆ ತಯಾರಿಸುವ ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವತಿಯಿಂದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಸಿಯೂಟ ಯೋಜನೆಯಡಿ ಶಾಲೆಗಳಲ್ಲಿ ದೇಶಾದ್ಯಂತ 20 ಲಕ್ಷಕ್ಕೂ ಹೆಚ್ಚು ಮಹಿಳೆಯರು ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ 20 ವರ್ಷಗಳಿಂದ 1.20 ಲಕ್ಷ ಮಂದಿ ಬಿಸಿಯೂಟ ತಯಾರಕರಾಗಿ ಕೆಲಸ ಮಾಡುತ್ತಿದ್ದಾರೆ. 60:40 ಅನುದಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೇತನ ಭರಿಸುತ್ತಿವೆ. ಒಬ್ಬರಿಗೆ ಮಾಸಿಕ ₹600 ಮಾತ್ರ ಕೇಂದ್ರ ಸರ್ಕಾರ ಗೌರವ ಸಂಭಾವನೆಯಾಗಿ ನೀಡುತ್ತಿದೆ. ಈ ಅಲ್ಪ ಸಂಭಾವನೆಯಲ್ಲಿ ಬಿಸಿಯೂಟ ತಯಾರಕರು ಜೀವನ ನಡೆಸುವುದು ಕಷ್ಟಕರವಾಗಿದೆ. ಆದ್ದರಿಂದ ಬಿಸಿಯೂಟ ತಯಾರಕ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೊಳಿಸಲು ಪ್ರಧಾನಿ ಅವರಿಗೆ ಒತ್ತಾಯಿಸಲು ವಿನಂತಿಸಿದರು.ಅಲ್ಲದೇ, ಬಿಸಿಯೂಟ ತಯಾರಕರಿಗೆ ಕೆಲಸದ ಭದ್ರತೆ ಸೇರಿದಂತೆ ಕಾರ್ಮಿಕ ಕಾಯ್ದೆ ಅಡಿಯಲ್ಲಿ ದೊರಕುವ ಇತರೆ ಸವಲತ್ತುಗಳನ್ನು ಒದಗಿಸಲು ಸದನದಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕೆಂದು ಮನವಿ ಮಾಡಿದರು.
ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು, ಬಿಸಿಯೂಟ ಸಿಬ್ಬಂದಿ ವಿಜಯಲಕ್ಷ್ಮೀ, ಎಂ.ಎನ್. ಗೀತಾ, ಮಂಗಳಮ್ಮ, ಮಂಜುಳ, ದೇವಮ್ಮ, ಎನ್. ಸುಮಾ ಮತ್ತಿತರರು ಹಾಜರಿದ್ದರು.- - -
-21ಕೆಡಿವಿಜಿ38ಃ:ದಾವಣಗೆರೆಯಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಸಂಸದೆ ಡಾ.ಪ್ರಭಾ ಅವರಿಗೆ ಮನವಿ ಸಲ್ಲಿಸಲಾಯಿತು.