ಕೊಪ್ಪಳ: ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ 153 ಗ್ರಾಪಂಗಳಿದ್ದು, 722 ಗ್ರಾಮಗಳಿವೆ. ಈ ಎಲ್ಲ ಗ್ರಾಮಗಳಲ್ಲಿ 430 ಗ್ರಾಮಗಳಿಗೆ ಡಿಬಿಓಟಿ ಎಂವಿಎಸ್ ಯೋಜನೆ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ. ಸದ್ಯಕ್ಕೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ 10 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ 2334 ಸರ್ಕಾರಿ ಮತ್ತು 6366 ಖಾಸಗಿ ಬೋರ್‌ವೆಲ್‌ಗಳಿದ್ದು, ಇದರಲ್ಲಿ 898 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿದೆ. ಖಾಸಗಿ ಬೋರ್‌ವೆಲ್‌ಗಳ ಮಾಲೀಕರಿಂದ ಕರಾರು ಪತ್ರವನ್ನು ಮಾಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.ಗ್ರಾಮೀಣ ಮಟ್ಟದಲ್ಲಿ ಅತೀಯಾಗಿ ಕುಡಿಯುವ ನೀರಿನ ಸಮಸ್ಯೆಯಾದರೆ, ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಿಕೊಳ್ಳಲು ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾದ ಅನುದಾನದಲ್ಲಿ ₹45 ಲಕ್ಷಗಳನ್ನು ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಮೀಸಲಿರಿಸಲಾಗಿದೆ ಎಂದು ಹೇಳಿದರು.ಪ್ರತಿ ತಾಲೂಕಿಗೆ ₹50 ಲಕ್ಷ:ಜಿಲ್ಲೆಯ ಏಳು ತಾಲೂಕಿನ ತಹಶೀಲ್ದಾರರ ಪಿ.ಡಿ. ಖಾತೆಯಲ್ಲಿ ಸಹ ತುರ್ತು ಕುಡಿಯುವ ನೀರಿನ ಸರಬರಾಜು ಸಲುವಾಗಿ ತಲಾ ₹50 ಲಕ್ಷಗಳನ್ನು ಕಾಯ್ದಿರಿಸಲಾಗಿದೆ. ಸದ್ಯಕ್ಕೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ತಿಳಿಸಿರುತ್ತಾರೆ. ಹೀಗಾಗಿ ಕುಡಿಯುವ ನೀರು ಸಲುವಾಗಿ ಜಿಲ್ಲಾಡಳಿತದಿಂದ ಎಲ್ಲಾ ರೀತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು.38 ವಾರಗಳ ಮೇವು ಲಭ್ಯ:ಜಿಲ್ಲೆಯಲ್ಲಿ ಇನ್ನು 5,71,66,5.11 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, ಇನ್ನು 38 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಮೇವಿನ ಸಮಸ್ಯೆ ಉಂಟಾದರೆ ಮೇವಿನ ಬ್ಯಾಂಕ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ರೈತರಿಗೆ ಮೇವಿನ ಕಿಟ್ ನೀಡಲು ಜಿಲ್ಲೆಯ ಪಶು ಸಂಗೋಪನಾ ಇಲಾಖೆಗೆ ಸರ್ಕಾರದಿಂದ 17,783 ಮಿನಿ ಕಿಟ್‌ಗಳು ಸರಬರಾಜು ಆಗಿದ್ದು, ಇದರಲ್ಲಿ 17,133 ಕಿಟ್‌ಗಳನ್ನು ಅವಶ್ಯವಿರುವ ರೈತರಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ ಮೇವಿನ ಸಮಸ್ಯೆ ಇರುವುದಿಲ್ಲ ಎಂದು ಹೇಳಿದರು.ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಮಾತನಾಡಿದರು.ಸಹಾಯವಾಣಿ ವಿವರ:ಜಿಲ್ಲಾಧಿಕಾರಿ ಕಚೇರಿ: 7676732001, ಕೊಪ್ಪಳ ತಾಲೂಕು ಕಚೇರಿ: 9380252346, ಯಲಬುರ್ಗಾ ಕಚೇರಿ: 9448833207, ಕುಷ್ಟಗಿ: 9845791349, ಕನಕಗಿರಿ: 9900433012, ಕುಕನೂರು: 8050303495, ಗಂಗಾವತಿ: 9740793877, ಕಾರಟಗಿ: 9743600343ಗೆ ಸಂಪರ್ಕಿಸಬಹುದಾಗಿದೆ.