ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಕೃಷಿ ಭವನದ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ತಾಲೂಕಿನ ಎಲ್ಲಾ ಗ್ರಾಪಂಗಳ ಪಿಡಿಒ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಿನ ಬಹುತೇಕ ಕೆರೆ-ಕಟ್ಟೆಗಳಲ್ಲಿ ನೀರು ತುಂಬಿರುವುದರಿಂದ ಮುಂದಿನ ಮೂರ್ನಾಲ್ಕು ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಆದರೂ ಕೂಡ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದರು.ಸಕಾಲದಲ್ಲಿ ಹಣ ಪಾವತಿಸಿ:
ಪ್ರತಿ 15 ದಿನಕ್ಕೊಮ್ಮೆ ಪಿಡಿಒಗಳು ತಮ್ಮ ವ್ಯಾಪ್ತಿಯ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಮಾಹಿತಿಯ ವರದಿ ನೀಡಬೇಕು. ಪ್ರತಿ ವಾರಕ್ಕೊಮ್ಮೆ ಪಿಡಿಒಗಳು ಸಭೆ ನಡೆಸಿ ತಾ.ಪಂ.ಇಒ ಅವರಿಗೆ ವರದಿ ಸಲ್ಲಿಸಬೇಕು ಎಂದರು.
ತಾಲೂಕಿನ ಗ್ರಾಪಂಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 86 ಮಂದಿ ನೀರುಗಂಟಿಗಳನ್ನು ಕಾಯಂ ಮಾಡಲಾಗಿದೆ. ಸಿಕ್ಕ ಅವಕಾಶದಲ್ಲಿ ಜನರಿಗೆ ಹೇಗೆಲ್ಲ ಒಳ್ಳೆಯದು ಮಾಡಲು ಸಾಧ್ಯವೋ ಅಷ್ಟು ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಕೆಲಸ ಮಾಡಿಕೊಟ್ಟವರನ್ನು ಅವರು ನೆನಪಿಟ್ಟುಕೊಂಡರೆ ನನಗೆ ಅದೇ ದೊಡ್ಡ ಕೊಡುಗೆ ಇದ್ದಂತೆ. ಕೆಲಸ ಮಾಡಿಕೊಟ್ಟವರಿಗೆ ಗ್ರಾಪಂ ನೌಕರರು ಕೃತಜ್ಞರಾಗಿರಬೇಕು ಎಂದರು.
ತಾಲೂಕಿನಲ್ಲಿ 3502ಜನರು ಆಶ್ರಯ ಯೋಜನೆಯಡಿ ಮನೆ ಕಟ್ಟಿದ್ದಾರೆ. ಅವರಿಗೆ ಅಡಮಾನಪತ್ರ ಬಿಡುಗಡೆ ಮಾಡಿ ಮಾಲೀಕತ್ವವನ್ನು ನೀಡಲಾಗಿದೆ. 58 ಸಾವಿರ ಇ-ಸ್ವತ್ತು ಬಾಕಿ ಇದ್ದು ಈ ಪೈಕಿ 16 ಸಾವಿರ ಇ-ಸ್ವತ್ತು ಪೂರ್ಣಗೊಂಡಿದೆ. ಉಳಿದಿರುವ ಇ-ಸ್ವತ್ತುಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ಅಡಚಣೆಯಾಗುವಂತಹ ಸಮಸ್ಯೆಗಳಿಗೆ ಪಿಡಿಒಗಳು ಮೊದಲು ಪರಿಹರ ಒದಗಿಸಬೇಕು ಎಂದರು.
ನಿವೇಶನ ಅಥವಾ ಜಮೀನಿನಲ್ಲಿ ಮನೆ ನಿರ್ಮಿಸಿ ವಿದ್ಯುತ್ ಸಂಪರ್ಕ ಪಡೆಯಲು ಸೆಸ್ಕ್ ಅಧಿಕಾರಿಗಳು ಗ್ರಾಪಂನಿಂದ ಎನ್‌ಒಸಿ ಅಥವಾ ಗ್ರಾಮ ಆಡಳಿತಾಧಿಕಾರಿಗಳ ದೃಢೀಕರಣವನ್ನು ಕೇಳುತ್ತಿದ್ದರು. ಇದನ್ನು ಸರಳೀಕರಣಗೊಳಿಸಲಾಗಿದೆ. ಯಾವುದೇ ಎನ್‌ಒಸಿ ಹಾಗೂ ದೃಢೀಕರಣವಿಲ್ಲದೆ ಮಾಲೀಕತ್ವದ ದಾಖಲೆಗಳ ಆಧಾರದ ಮೇಲೆ ವಿದ್ಯುತ್ ಸಂಪರ್ಕ ನೀಡುವಂತೆ ಸೆಸ್ಕ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಶೇ.100ರಷ್ಟು ಕಂದಾಯ ವಸೂಲಿಯಾಗಬೇಕು:
5 ಕೋಟಿ ರು. ವೆಚ್ಚದಲ್ಲಿ ಹೊಸ ತಾಪಂ ಕಟ್ಟಡ:
ಬಹಳ ಹಳೆಯದಾದ ಶಿಥಿಲಗೊಂಡಿರುವ ತಾಪಂ ಕಟ್ಟಡವನ್ನು ನೆಲಸಮಗೊಳಿಸಿ ಈ ಜಾಗದಲ್ಲಿ ಹೊಸದಾಗಿ ಸುಮಾರು 5 ಕೋಟಿ ರು. ವೆಚ್ಚದಲ್ಲಿ ಹೊಸ ತಾಲೂಕು ಪಂಚಾಯ್ತಿ ಕಟ್ಟಡ ನಿರ್ಮಿಸಲಾಗುವುದು. ಇದರ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಈಗಾಗಲೇ ಮೊದಲ ಹಂತವಾಗಿ 1.5ಕೋಟಿ ರು. ಹಣ ಬಿಡುಗಡೆಯಾಗಿದೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು. ಅದೇ ರೀತಿ ಪಟ್ಟಣದಲ್ಲಿ ಪುರಸಭೆ ಕಚೇರಿ ಕಟ್ಟಡ ಹಾಗೂ ಡಾ.ಅಂಬೇಡ್ಕರ್ ಭವನ ನಿರ್ಮಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದರು.ಸಭೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಜಿ.ಆದರ್ಶ, ತಾಪಂ ಇಒ ಸತೀಶ್, ಜಂಟಿ ಕೃಷಿ ನಿರ್ದೇಶಕ ಹಾಗೂ ತಾಪಂ ಆಡಳಿತಾಧಿಕಾರಿ ಅಶೋಕ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಎಲ್ಲಾ ಗ್ರಾಪಂ ಪಿಡಿಒಗಳು ಇದ್ದರು.