ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಏಕಗವಾಕ್ಷಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಐಎಡಿಬಿಯಿಂದ ನಿರ್ಮಿಸಲಾದ ವಸತಿ ಗೃಹ ಹಾಗೂ ನಿವೇಶನಗಳಿಗೆ ಪೂರ್ಣ ಹಣ ಸಂದಾಯ ಮಾಡಿದವರಿಗೆ ಹಂಚಿಕೆ ಪತ್ರಗಳನ್ನು ನೀಡಬೇಕು. ಹಣ ಸಂದಾಯ ಮಾಡದವರಿಗೆ ಪೂರ್ತಿ ಹಣ ಸಂದಾಯ ಮಾಡಿದ ನಂತರ ಹಂಚಿಕೆ ಪತ್ರಗಳನ್ನು ನೀಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗಾಗಿ ಇಲ್ಲಿಯವರೆಗೆ 690 ಎಕರೆ 13 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 28/2 ನೋಟೀಸ್ ನೀಡಲಾಗಿದೆ. ಜೆಎಂಸಿ ಕಾರ್ಯವನ್ನು ಸರ್ವೆ ಇಲಾಖೆಯ ಮುಖಾಂತರ ಬೇಗನೆ ಪ್ರಾರಂಭಿಸಬೇಕು. ಜವಳಿ ಪಾರ್ಕ್ ಸ್ಥಾಪನೆಗಾಗಿ ಜಿಲ್ಲೆಯಲ್ಲಿ 1000 ಎಕರೆ ಭೂಮಿ ಸೇರಿದಂತೆ ಅಗತ್ಯತೆಯ ವಿದ್ಯುತ್ ಹಾಗೂ ನೀರಿನ ಸರಬರಾಜಿನ ಕುರಿತು ಆದಷ್ಟು ತ್ವರಿತವಾಗಿ ಪ್ರಸ್ತಾವನೆ ಕಳುಹಿಸುವಂತೆ ತಿಳಿಸಿದರು.ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕಾಗಿ ಜೆಎಮ್‌ಸಿ ಕಾರ್ಯವು ಪ್ರಗತಿಯಲ್ಲಿದ್ದು, ಹೊಸ ಕೈಗಾರಿಕಾ ಪ್ರದೇಶಕ್ಕಾಗಿ ಬೇಕಾದ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಕೈಗಾರಿಕೆ ಪ್ರದೇಶದಲ್ಲಿ ಕೈಗಾರಿಕೆಯನ್ನು ಸ್ಥಾಪಿಸಲು ಅರ್ಜಿ ಸಲ್ಲಿಸಿದವರಿಗೆ ಕೈಗಾರಿಕಾ ಪ್ರದೇಶದಲ್ಲಿ ಜಾಗ ನೀಡಲು ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಬೇಕು. ಅರ್ಜಿ ಸಲ್ಲಿಸಿ ಹಣ ಭರಿಸಿದವರಿಗೆ ಜಾಗ ನೀಡಲು ಯಾವುದೇ ವಿಳಂಬವಾಗಬಾರದು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಮನಿಕ್.ವಿ ರಘೂಜಿ, ಉಪನಿರ್ದೇಶಕ ಬಸವರಾಜ ಯಂಕಂಚಿ, ಸಹಾಯಕ ನಿರ್ದೇಶಕ ಲಕ್ಷ್ಮೀಕಾಂತ ಕುಲಕರ್ಣಿ, ಕೈಗಾರಿಕಾ ಮತ್ತು ವಾಣಿಜ್ಯ ಉದ್ಯಮಿಗಳಾದ ಸಾವಿತ್ರಿ ಪುರುಷೋತ್ತಮ, ತ್ರಿವಿಕ್ರಮ ಜೋಷಿ, ಲಕ್ಷ್ಮೀರೆಡ್ಡಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.