ಕನ್ನಡಪ್ರಭ ವಾರ್ತೆ ಮೂಡಲಗಿ
ಶುಕ್ರವಾರ ಪಟ್ಟಣದ ತಹಸೀಲ್ದಾರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡ ನಿರ್ಮಾಣದ ವಿವಿಧ ಕೆಲಸ ಮಾಡುವ ಕಾರ್ಮಿಕರು ಈ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು ₹3 ಸಾವಿರ ಪಿಂಚಣಿ ನೀಡುತ್ತಿದೆ. ಕಟ್ಟಡ ಕಾಮಗಾರಿ ನಡೆಯುವ ವೇಳೆ ಕಾರ್ಮಿಕರು ಮೃತಪಟ್ಟರೆ ₹5 ಲಕ್ಷ ವರೆಗೆ ವಿಮಾ ಸೌಲಭ್ಯವಿದೆ. ₹2 ಲಕ್ಷವರೆಗಿನ ಆರೋಗ್ಯ ವೆಚ್ಚವನ್ನು ಇಲಾಖೆಯೇ ಭರಿಸಲಿದೆ. ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರು ನೋಂದಾಯಿಸಿ ಗುರುತಿನ ಚೀಟಿ ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗಲಿದೆ ಎಂದು ಹೇಳಿದರು.ಇದೇ ವೇಳೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 2023-24ನೇ ಸಾಲಿಗೆ ಕಾರ್ಮಿಕರಿಗೆ 1200 ಕಿಟ್ ವಿತರಿಸಿದರು.