ಕನ್ನಡಪ್ರಭ ವಾರ್ತೆ ವಿಜಯಪುರ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರ ಕೆಲಸ ಒದಗಿಸಿ ವಲಸೆ ತಡೆಯುವ ಉದ್ದೇಶದಿಂದ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ/ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ ಅಭಿಯಾನವನ್ನು ಮಾರ್ಚ್ ೧೫ ರಿಂದ ಮೇ ೩೧ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಳೆ ಕೊರತೆಯಿಂದ ವಿಜಯಪುರ ಜಿಲ್ಲೆಯ ೧೩ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಜಿಲ್ಲೆಯಲ್ಲಿ ತಲೆದೋರಿರುವ ಬರದಿಂದ ಗ್ರಾಮೀಣ ಪ್ರದೇಶದ ಅನೇಕ ಕುಟುಂಬಗಳಿಗೆ ಜೀವನ ನಿರ್ವಹಣೆಗೆ ನರೇಗಾ ಯೋಜನೆಯಡಿ ಸ್ಥಳೀಯವಾಗಿ ಅಕುಶಲ ಕೆಲಸ ಒದಗಿಸಲಾಗುತ್ತಿದೆ.ಜನರು ಉದ್ಯೋಗ ಅರಸಿ ವಲಸೆ ಹೋಗುತ್ತಿರುವುದನ್ನು ತಡೆಯಲು, ಮುಂಗಾರು ಆರಂಭಕ್ಕೂ ಮುನ್ನ ಹೆಚ್ಚಿನ ಜನರಿಗೆ ಸ್ಥಳೀಯವಾಗಿ ನಿಗದಿತ ಸಮಯದಲ್ಲಿ ನಿರಂತರ ಕೆಲಸ ಒದಗಿಸುವುದು ಅಗತ್ಯವಾಗಿದೆ.ಗುಳೆ ತಡೆಯುವ ಉದ್ದೇಶ:
ಮಾಹಿತಿಗಾಗಿ ನರೇಗಾ ಸಹಾಯವಾಣಿ ಸಂಖೆ: ೮೨೭೭೫೦೬೦೦೦ ಹಾಗೂ ಜಿಪಂ ನರೇಗಾ ಸಹಾಯವಾಣಿ ಸಂಖ್ಯೆ: ೯೪೮೦೮ ೩೧೬೯೯ ಗೆ ಸಂಪರ್ಕಿಸಬಹುದು ಅಥವಾ ಹತ್ತಿರದ ಗ್ರಾಪಂಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.---
ಕೋಟ್----೨೦೨೪-೨೫ನೇ ಸಾಲಿಗೆ ವಿಜಯಪುರ ಜಿಲ್ಲೆಗೆ ೪೨ ಲಕ್ಷ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಮಾನವೃ ದಿನ ಸೃಷ್ಟಿಸಲು ಗ್ರಾಮ ಪಂಚಾಯತಿಗಳ ಕ್ರಿಯಾಯೋಜನೆ ಈಗಾಗಲೇ ಅನುಮೋದಿಸಲಾಗಿದೆ. ಅನುಮೋದನೆಯಾದ ಕಾಮಗಾರಿಗಳಲ್ಲಿನ ಸಮುದಾಯ ಹಾಗೂ ಕೂಲಿ ಆಧಾರಿತ ಕಾಮಗಾರಿಗಳನ್ನು ಮಾತ್ರ ಆರ್ಥಿಕ ವರ್ಗದ ಏಪ್ರಿಲ್, ಮೇ ಮತ್ತು ಜೂನ್ ಮಾಹೆಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶ ನೀಡಲಾಗಿದೆ.
-ರಿಶಿ ಆನಂದ ಜಿಪಂ ಸಿಇಒ