ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಆಶಾಪುರ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಿಎಂ ವಿಶ್ವಕರ್ಮ ಯೋಜನೆ 3ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿರುವ ಕುಶಲಕರ್ಮಿಗಳನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆ ನಿರ್ಮಾಣವಾಗಿದೆ. ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ತರಬೇತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬಹುದು. ಇದಲ್ಲದೆ ಈ ಯೋಜನೆಯಡಿ ಬ್ಯಾಂಕುಗಳ ಮುಖಾಂತರ ಸಾಲ ಸೌಲಭ್ಯ ಕೂಡ ಲಭ್ಯವಿದ್ದು, ಅರ್ಹ ಫಲಾನುಭವಿಗಳು ಸರಿಯಾದ ಮಾಹಿತಿ ಪಡೆದುಕೊಂಡು ಯೋಜನೆ ಸೌಲಭ್ಯ ಪಡೆಯಬೇಕು ಎಂದು ಹೇಳಿದರು.
ಜಿಲ್ಲಾ ಕೈಗಾರಿಕಾ ತರಬೇತಿಯ ಜಂಟಿ ನಿರ್ದೇಶಕ ಬಸವರಾಜ ಯಂಕಂಚಿ ಮಾತನಾಡಿದರು.ಈ ಸಂದರ್ಭದಲ್ಲಿ ಪಿಎಂ ವಿಶ್ವಕರ್ಮ ಜಿಲ್ಲಾ ನೋಡಲ್ ಅಧಿಕಾರಿ ಆನಂದ ಕುಮಾರ್, ಎಸ್.ಬಿ.ಐನ ಎಲ್.ಬಿ.ಒ ಸಿಬ್ರಾರಾಮ್ ಮಿಶ್ರಾ, ಎಸ್ಬಿಐ ಮುಖ್ಯ ಅಸೋಸಿಯೇಟ್ ಸೋಮಶೇಖರ್, ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಶರಣಬಸವ ಪಾಟೀಲ್, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಬ್ರಾಂಚ್ ಮ್ಯಾನೇಜರ್ ರಂಜಿತ್ ಕುಮಾರ್, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರಾದ ವಿಜಯ ಕುಮಾರ್ ಬಡಿಗೇರ್, ರವಿಶೇಖರ, ಗೀತಾ, ತರಬೇತಿದರರು ಸೇರಿ ವಿವಿಧ ಗ್ರಾಮದ ಮಹಿಳೆಯರು ಇದ್ದರು.