ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗ ಪಡೆದುಕೊಳ್ಳಿ

KannadaprabhaNewsNetwork |  
Published : Dec 08, 2025, 02:45 AM IST
ಪೋಟೋ ಇದೆ. | Kannada Prabha

ಸಾರಾಂಶ

ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಡಿ. 13ರಂದು ಜರುಗಲಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳನ್ನು ಲೋಕ ಅದಾಲತ್‌ನ ಮೂಲಕ ತಕ್ಷಣ ಪರಿಹಾರ ಪಡೆದುಕೊಳ್ಳಲು ಒಂದು ಸುವರ್ಣಾವಕಾಶವಾಗಿರುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್. ತಿಳಿಸಿದರು.

ಹಾವೇರಿ: ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಡಿ. 13ರಂದು ಜರುಗಲಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳನ್ನು ಲೋಕ ಅದಾಲತ್‌ನ ಮೂಲಕ ತಕ್ಷಣ ಪರಿಹಾರ ಪಡೆದುಕೊಳ್ಳಲು ಒಂದು ಸುವರ್ಣಾವಕಾಶವಾಗಿರುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪಾ ಎನ್. ತಿಳಿಸಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟರ್ ಅಪಘಾತ ನ್ಯಾಯಾಧೀಕರಣದ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ವಾಣಿಜ್ಯ ಪ್ರಕರಣಗಳು, ವ್ಯಾಜ್ಯಪೂರ್ವ ಪ್ರಕರಣಗಳು, ಸೇವಾ ಪ್ರಕರಣಗಳು, ರಾಜಿ ಆಗಬಲ್ಲ ಅಪರಾಧೀಕ ಪ್ರಕರಣಗಳು, ಗ್ರಾಹಕ ವ್ಯಾಜ್ಯ ಪ್ರಕರಣಗಳು, ಪಾಲುದಾರಿಕಾ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪೊಲೀಸ್ ಇಲಾಖೆ, ಭೂಸ್ವಾಧೀನಾಧಿಕಾರಿಗಳಿಗೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ನೀಡಲಾಗಿದೆ ಎಂದರು.ಶೇ. 50 ರಿಯಾಯಿತಿ: ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92ರಿಂದ 2019ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆ/ ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿಎಸ್‌ಎ (ಇಲಾಖಾ ಶಾಸನ) ಪ್ರಕರಣದ ದಂಡದ ಮೊತ್ತದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ ನ. 21ರಿಂದ ಡಿ. 12ರ ವರೆಗೆ ಕಾಲಾವಕಾಶ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿರುತ್ತದೆ. ವಾಹನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದನ್ವಯ ನ. 21ರಿಂದ ಡಿ. 12ರವ ರೆಗೆ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಶೇ. 50ರಷ್ಟು ಮಾತ್ರ ದಂಡವನ್ನು ಪಾವತಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.ಲೋಕ ಅದಾಲತ್‌ನ ಪ್ರಯೋಜನಗಳು:ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು, ಜನತಾ ನ್ಯಾಯಾಲಯದಲ್ಲಿ ನೀವೇ ನೇರವಾಗಿ ಅಥವಾ ವಕೀಲರ ಮುಖಾಂತರ ಭಾಗವಹಿಸಬಹುದು, ನ್ಯಾಯಾಲಯಗಳಲ್ಲಿ ಉಭಯ ಪಕ್ಷದಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ಮಾಡಲಾಗುವುದು, ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು (ವ್ಯಾಜ್ಯಪೂರ್ವ ಪ್ರಕರಣಗಳು) ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವ್ಯಾಜ್ಯಪೂರ್ವ ಪ್ರಕರಣಗಳಲ್ಲಿ ನ್ಯಾಯಾಲಯ ಶುಲ್ಕ (ಕೋರ್ಟ್‌ ಫೀ) ಕೊಡಬೇಕಾಗಿಲ್ಲ. ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಎಂದರು.ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ಒಪ್ಪಿಗೆಯಾದಲ್ಲಿ ಮಾತ್ರ ನೀವು ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಹಾಗೂ ಮೇಲ್ಮನವಿಗೆ ಅವಕಾಶ ಇಲ್ಲ ಎಂದು ತಿಳಿಸಿದರು. ಜೀವನದಲ್ಲಿ ನಗು ಮತ್ತು ನೆಮ್ಮದಿ ಬಹಳ ಮುಖ್ಯ, ಇವುಗಳನ್ನು ಖರೀದಿಸಲು ಸಾಧ್ಯವಿಲ್ಲ. ನಗು ಮತ್ತು ನೆಮ್ಮದಿ ಜೀವನದಲ್ಲಿ ಇರಬೇಕೆಂದರೆ ಆಸ್ಪತ್ರೆ ಹಾಗೂ ನ್ಯಾಯಾಲಯದ ಅಲೆದಾಟ ಇರಬಾರದು. ವ್ಯಾಜ್ಯ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡಾಗ, ಸಮಯ, ಹಣದ ಉಳಿತಾಯವಾಗುತ್ತದೆ ಹಾಗೂ ಸಂಬಂಧಗಳು ಕೆಡುವುದಿಲ್ಲ ಜೊತೆಗೆ ನೆಮ್ಮದಿ ಕಾಣಬಹುದು ಎಂದರು.ಕಾನೂನು ನೆರವಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ದೂ.08375-233939 ಹಾಗೂ ರಾಣಿಬೆನ್ನೂರು, ಹಿರೇಕೆರೂರು, ಬ್ಯಾಡಗಿ, ಶಿಗ್ಗಾಂವಿ, ಸವಣೂರ ಮತ್ತು ಹಾನಗಲ್ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿಗಳನ್ನು ಅಥವಾ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಟೋಲ್ ಫ್ರಿ ಸಂಖ್ಯೆ 151000 ಸಂಪರ್ಕಿಸಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಶ್ರೀಶೈಲಜಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಮುಂದಿನ ಸಿಎಂ ಯಾರು?’ ಎನ್ನುವ ಬಗ್ಗೆಯೂ ರಾಜ್ಯದಲ್ಲಿ ಬೆಟ್ಟಿಂಗ್‌ - ನಿಯಂತ್ರಿಸಿ'
ಕ್ರೈಂ ಹೆಚ್ಚಳಕ್ಕೆ ಸಿಬ್ಬಂದಿ ಕೊರತೆ ಕಾರಣ : ಡಾ.ಜಿ.ಪರಮೇಶ್ವರ್‌