ತರೀಕೆರೆ : ಜನಸ್ಪಂದನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ : ಶಾಸಕ ಜಿ.ಎಚ್. ಶ್ರೀನಿವಾಸ್

KannadaprabhaNewsNetwork |  
Published : Sep 04, 2024, 02:15 AM ISTUpdated : Sep 04, 2024, 10:54 AM IST
ಲಿಂಗದಹಳ್ಳಿಯಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ | Kannada Prabha

ಸಾರಾಂಶ

ಜನಸ್ಪಂದನ ಕಾರ್ಯಕ್ರಮದ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕೆಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.  

 ತರೀಕೆರೆ :  ಜನಸ್ಪಂದನ ಕಾರ್ಯಕ್ರಮದ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕೆಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು. ಅವರು, ಮಂಗಳವಾರ ತಾಲೂಕು ಅಡಳಿತ ತರೀಕೆರೆ ವತಿಯಿಂದ ಲಿಂಗದಹಳ್ಳಿ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ, 94-ಸಿ ಹಕ್ಕು ಪತ್ರ ವಿತರಣೆ, ಪಿಂಚಣಿ ಅದಾಲತ್, ಪೌತಿ ಖಾತೆ ಅಂದೋಲನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ತರೀಕೆರೆ, ಅಜ್ಜಂಪುರ, ಹುಣಸಘಟ್ಟ, ಅಮೃತಾಪುರ ಇತ್ಯಾದಿ ಕಡೆಗಳಲ್ಲಿ ಜನಸ್ಪಂದನ ಕಾರ್ಯಕ್ರಮಗಳನ್ನು ನೆಡೆಸಲಾಗಿದೆ. ಇದೀಗ ಲಿಂಗದಹಳ್ಳಿಯಲ್ಲಿ ನಿಮ್ಮ ಮನೆ ಬಾಗಿಲಿಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ನಿಮ್ಮ ಖಾತೆ ಬದಲಾವಣೆ ಖಂಡಿತ ಆಗುತ್ತದೆ. 94-ಸಿ ಹಕ್ಕು ಪತ್ರ ವಿತರಣೆ ಆರು ವರ್ಷದಿಂದ ಬಾಕಿ ಇದ್ದು, ಶೇ.70ರಷ್ಟು ಭಾಗ ಮುಗಿದಿದೆ. 94-ಸಿ ಪತ್ರ ವಿತರಿಸಲಾಗುವುದು. ನಿಮ್ಮ ಆಹವಾಲುಗಳನ್ನು ಅಧಿಕಾರಿಗಳು ಇಲ್ಲೆ ಪರಿಹರಿಸುತ್ತಾರೆ. ಲಿಂಗದಹಳ್ಳಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ತಿಳಿದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಮಾತನಾಡಿ, ಜನಸ್ಪಂದನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಬಗೆಹರಿಸುತ್ತಾರೆ. ಬಹಳ ಕಷ್ಟಪಟ್ಟು ಕೆರೆಗಳಿಗೆ ನೀರು ಹರಿಸಲಾಗಿದೆ. ಕೆರೆಗೆ ಶಾಸಕ ಜಿ.ಎಚ್. ಶ್ರೀನಿವಾಸ್ ಅವರು ಮೂರು ಬಾರಿ ಬಾಗಿನ ಅರ್ಪಿಸಿದ್ದಾರೆ. ಕೆರೆಯಿಂದ ಕೆರೆಗೆ ಪೈಪೈ ಲೈನ್ ಕೂಡ ಮಾಡಿಸಿದ್ದಾರೆ ಎಂದರು.

ಉಪವಿಭಾಗಾಧಿಕಾರಿ ಡಾ.ಕೆ.ಜಿ. ಕಾಂತರಾಜ್ ಮಾತನಾಡಿ, ತಾಲೂಕು ಅಡಳಿತ ವತಿಯಿಂದ ಲಿಂಗದಹಳ್ಳಿಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಆಹವಾಲುಗಳನ್ನು ಸ್ವೀಕರಿಸಲಾಗುವುದು. ನಿವೇಶನ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದೆ. ಇ-ಖಾತೆಗಳನ್ನು ಮಾಡಿಸಿಕೊಳ್ಳಬೇಕು. ಒತ್ತುವರಿಯಾಗಿರುವ ಕೆರೆ ಮತ್ತು ರಸ್ತೆಗಳನ್ನು ತೆರುವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಲಿಂಗದಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ತಹಸೀಲ್ದಾರ್ ರಾಜೀವ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ದೇವೇಂದ್ರಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

PREV

Recommended Stories

ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್