ಗ್ಯಾರಂಟಿ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಶಾಸಕ ಬಿ.ಎಂ.ನಾಗರಾಜ

KannadaprabhaNewsNetwork |  
Published : Feb 05, 2025, 12:32 AM IST
ಸಿರುಗುಪ್ಪ ನಗರದಲ್ಲಿ ಜರುಗಿದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಶಾಸಕ ಬಿ.ಎಂ.ನಾಗರಾಜ್ ಉದ್ಘಾಟಿಸಿದರು.  | Kannada Prabha

ಸಾರಾಂಶ

ಸಿರುಗುಪ್ಪ ತಾಲೂಕು ಪಂಚಾಯತ್ ವತಿಯಿಂದ ಸಿರುಗುಪ್ಪ ಪಟ್ಟಣದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಬಳ್ಳಾರಿ: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ ಹೇಳಿದರು.

ಸಿರುಗುಪ್ಪ ತಾಲೂಕು ಪಂಚಾಯತ್ ವತಿಯಿಂದ ಸಿರುಗುಪ್ಪ ಪಟ್ಟಣದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಗ್ಯಾರಂಟಿ ಯೋಜನೆಗಳ ಬಗ್ಗೆ ತಮ್ಮ-ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಜಿಎಸ್‌ಟಿ ಇತರೆ ತಾಂತ್ರಿಕ ತೊಂದರೆಗಳಿಂದ ವಂಚಿತರಾಗಿರುವ ಅರ್ಹ ಫಲಾನುಭವಿಗಳನ್ನು ಗ್ಯಾರಂಟಿ ಯೋಜನಾ ಸಮಿತಿ ಸದಸ್ಯರು ತಮ್ಮ ಕ್ಷೇತ್ರದಲ್ಲಿ ಗುರುತಿಸಿ ಯೋಜನೆಯ ಸೌಲಭ್ಯ ಒದಗಿಸಲು ಕಾರ್ಯಪ್ರವೃತರಾಗಬೇಕು ಎಂದು ನಿರ್ದೇಶನ ನೀಡಿದರು.

ಬಳಿಕ ಶಾಸಕರು ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಯೋಜನೆ ಮತ್ತು ಯುವನಿಧಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಂಡ ಫಲಾನುಭವಿಗಳ ಅಂಕಿ-ಸಂಖ್ಯೆಗಳ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ. ಚಿದಾನಂದಪ್ಪ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಹಳ್ಳಿ ಮಟ್ಟದಲ್ಲಿಯೂ ತಲುಪಿಸುವಂತಾಗಲು ಹಾಗೂ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಸಾಕಷ್ಟು ಪ್ರಚಾರ ನೀಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಿರುಗುಪ್ಪ ತಾಲೂಕು ಅಧ್ಯಕ್ಷ ಮಾರುತಿ ರೆಡ್ಡಿ ವರಪ್ರಸಾದ್, ಉಪಾಧ್ಯಕ್ಷ ಕರಿಬಸಪ್ಪ, ಸದಸ್ಯರಾದ ಎಸ್.ಎಂ. ನಾಗರಾಜ ಸ್ವಾಮಿ, ಪಾಲಾಕ್ಷಗೌಡ, ವೆಂಕಟರೆಡ್ಡಿ, ಚನ್ನಬಸವ, ಕೆ. ವೀರೇಶ ನಾಯ್ಕ, ಜಿ. ಬಸವನಗೌಡ, ಬಿ.ಎಂ. ಅಪ್ಪಾಜಿ ನಾಯಕ, ಬಿ.ಕೆ. ಹಸೇನ್, ಡಿ. ದಾನೇಶ್ವರಿ, ಅಗ್ರಹಾರ ಗೋವಿಂದ, ಎಸ್. ಶ್ಯಾಂಸುಂದರ್, ಬಿ.ದೊಡ್ಡ ಪರಮೇಶ್ವರಪ್ಪ, ಸಿರುಗುಪ್ಪ ತಾಪಂ ಇಒ ಪವನ ಕುಮಾರ್ ಎಸ್. ದಂಡಪ್ಪನವರ, ಗ್ರೇಡ್-2 ತಹಸೀಲ್ದಾರ್‌ ಸತ್ಯಮ್ಮ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಉದ್ಯೋಗ ವಿನಿಮಯ ಕೇಂದ್ರ, ಜೆಸ್ಕಾಂ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಸಿರುಗುಪ್ಪ ವಿಭಾಗ ಸಿಬ್ಬಂದಿ, ಆಹಾರ ಶಿರಸ್ತೇದಾರರು ಸೇರಿದಂತೆ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ