ಕನ್ನಡಪ್ರಭ ವಾರ್ತೆ ಅರಸೀಕೆರೆ
ವಿಶ್ವ ರಕ್ತದಾನ ದಿನಾಚರಣೆಯ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಂಡೆನಾಳು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚನ್ನರಾಯಪಟ್ಟಣ ಇವರ ಸಹಯೋಗದೊಂದಿಗೆ ಗಂಡಸಿ ಹ್ಯಾಂಡ್ ಪೋಸ್ಟ್ ನಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂಥ ಶಿಬಿರಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಆಯೋಜಿಸಲಾಗಿರುತ್ತದೆ. ವಿವಿಧ ಬಗೆಯ ವೈದ್ಯರು ಒಂದೆಡೆ ದೊರಕುವುದರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು, ರಕ್ತದಾನ ಬಹಳ ಮಹತ್ತರವಾದದ್ದು ಎಂದು ತಿಳಿಸಿದರು.
ಶಿಬಿರದ ಉದ್ಘಾಟನೆ ನೆರವೇರಿಸಿದ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಶಬ್ಬೀರ್ ಅಹ್ಮದ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ವಿಶ್ವ ರಕ್ತದಾನ ದಿನಾಚರಣೆ ಆಚರಿಸುತ್ತಿರುವುದು ಖುಷಿಯ ವಿಚಾರ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರವನ್ನು ವ್ಯವಸ್ಥಿತವಾಗಿ ಆಯೋಜಿಸಿರುವುದು ತುಂಬಾ ಅನುಕೂಲವಾಗುತ್ತದೆ ಎಂದು ತಿಳಿಸಿ, ಜಿಲ್ಲೆಯಾದ್ಯಂತ ರೆಡ್ ಕ್ರಾಸ್ ಸಂಸ್ಥೆ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ತಿಳಿಸಿಕೊಟ್ಟರು,ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಭರತ್ ಕುಮಾರ್, ವಿಶ್ವ ರಕ್ತ ದಾನಿಗಳ ದಿನಾಚರಣೆ ಆಚರಿಸುತ್ತಿರುವುದು ನಮಗೆ ಹಾಗೂ ನಮ್ಮ ಸಂಸ್ಥೆಗೆ ಹೆಮ್ಮೆಯ ವಿಚಾರ. ರಕ್ತದಾನಿಗಳು ಎಂದರೆ ಇನ್ನೊಂದು ಜೀವಕ್ಕೆ ಜೀವ ದಾನಿಗಳು, ನಾವು ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದರೂ ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಾಗಿಲ್ಲ, ಆದ್ದರಿಂದ ಒಬ್ಬ ಸಹೃದಯಿ ರಕ್ತದಾನ ಮಾಡಿದರೆ ಮೂರು ಜನರ ಜೀವ ಉಳಿಸಲು ಸಾಧ್ಯ, ಈ ನಿಟ್ಟಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕದ ವತಿಯಿಂದ ಜಿಲ್ಲೆಯಾದ್ಯಂತ ಹಲವು ಬಾರಿ ರಕ್ತದಾನ ಮಾಡಿರುವವರನ್ನು ಗುರುತಿಸಿ, ಇಂದು 8 ರಕ್ತ ದಾನಿಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಹಾಗೂ ಅಭಿನಂದಿಸಿದ್ದೇವೆ. ಇನ್ನೂ ಹೆಚ್ಚಿನ ರೀತಿ ಸಾರ್ವಜನಿಕರ ಸೇವೆ ಮಾಡುವಲ್ಲಿ ರೆಡ್ ಕ್ರಾಸ್ ಸಂಸ್ಥೆಯು ನಿರಂತರವಾಗಿ ತನ್ನ ಕಾರ್ಯ ಚಟುವಟಿಕೆಗಳನ್ನು ಮುಂದುವರಿಸುತ್ತದೆ ಎಂದು ತಿಳಿಸಿದರು,
ಈ ಕಾರ್ಯಕ್ರಮದಲ್ಲಿ 216 ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ 52 ಜನರು ರಕ್ತದಾನ ಮಾಡಿದರು.