ದೇವನಹಳ್ಳಿ: ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಸೌಕರ್ಯಗಳ ಜೊತೆಗೆ ಓದಲು ಒಳ್ಳೆಯ ವಾತಾವರಣ ಕಲ್ಪಿಸಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉನ್ನತ ವಿದ್ಯಾಭ್ಯಾಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ನಂತರ ಅಣ್ಣೆಶ್ವರ ಗ್ರಾಪಂ ವ್ಯಾಪ್ತಿ ಯರ್ತಿಗಾನಹಳ್ಳಿಯ ನೂತನ ಸರ್ಕಾರಿ ಶಾಲಾ ಕಟ್ಟಡವನ್ನು ಉದ್ಘಾಟಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ವಿಷೇಶಚೇತನ 1023 ಕುಟುಂಬಗಳಿಗೆ ಯುಪಿಎಸ್ ಗಳನ್ನು ನೀಡಿದರು. ಭುವನಹಳ್ಳಿ ಗ್ರಾಮದಲ್ಲಿ ಮಹಿಳಾ ವರ್ಕ್ ಶೆಡ್ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಡಾ. ಕೆ.ಎನ್.ಅನುರಾಧ, ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷ ಶಾಂತಕುಮಾರ್, ತಾಲೂಕು ಅಧ್ಯಕ್ಷ ಜಗನ್ನಾಥ, ಪುರಸಭೆ ಮಾಜಿ ಅಧ್ಯಕ್ಷ ಮುನಿಕೃಷ್ಣ, ಜಿಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಇತರರು ಉಪಸ್ಥಿತರಿದ್ದರು.೨೧ ದೇವನಹಳ್ಳಿ ಚಿತ್ರಸುದ್ದಿ ೦೧ :
ದೇವನಹಳ್ಳಿ ಪಟ್ಟಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚವಿ ಕೆ.ಎಚ್.ಮುನಿಯಪ್ಪ ಉದ್ಘಾಟಿಸಿದರು.