ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜು ಸದುಪಯೋಗಿಸಿಕೊಳ್ಳಿ

KannadaprabhaNewsNetwork |  
Published : Jan 17, 2025, 12:46 AM IST
(ಫೋಟೋ 15ಬಿಕೆಟಿ5, ಕಾಲೇಜಿನ ಉಪನ್ಯಾಸಕ ಎಂ.ಎಂ.ರಘು ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು) | Kannada Prabha

ಸಾರಾಂಶ

ಮೈಸೂರಿನ ಜೆಎಸ್ಎಸ್ ವಿಶೇಷಚೇತನರ ಕಾಲೇಜು ಅಂಗವಿಕಲರಿಗಾಗಿ ಕಳೆದ ಮೂವತ್ತು ವರ್ಷಗಳ ಹಿಂದೆ ಪ್ರತ್ಯೇಕ ಪಾಲಿಟೆಕ್ನಿಕ್ ಕಾಲೇಜು ಆರಂಭಿಸಿದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಮೈಸೂರಿನ ಜೆಎಸ್ಎಸ್ ವಿಶೇಷಚೇತನರ ಕಾಲೇಜು ಅಂಗವಿಕಲರಿಗಾಗಿ ಕಳೆದ ಮೂವತ್ತು ವರ್ಷಗಳ ಹಿಂದೆ ಪ್ರತ್ಯೇಕ ಪಾಲಿಟೆಕ್ನಿಕ್ ಕಾಲೇಜು ಆರಂಭಿಸಿದೆ. ಬಾಗಲಕೋಟೆ ಭಾಗದ ಅಂಗವಿಕಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಉಪನ್ಯಾಸಕ ಎಂ.ಎಂ.ರಘು ಹೇಳಿದರು.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗವಿಕಲರು ತಾಂತ್ರಿಕ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಈ ಕಾಲೇಜು ಆರಂಭಗೊಂಡಿದೆ. ಸದ್ಯದಲ್ಲಿ ಬಿ.ಇ ಕಾಲೇಜು ಸ್ಥಾಪನೆಯಾಗಲಿದೆ. ಪ್ರತಿ ವರ್ಷ 350, 400 ವಿದ್ಯಾರ್ಥಿಗಳ ಪ್ರವೇಶವಿದೆ. ಅದರಲ್ಲಿ ಧಾರವಾಡ, ಹಾವೇರಿ, ಬಳ್ಳಾರಿ ಭಾಗ ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ. ಆದರೇ ಬಾಗಲಕೋಟೆ, ವಿಜಯಪುರ ಭಾಗದ ಅಂಗವಿಕಲ ವಿದ್ಯಾರ್ಥಿಗಳು ಆಗಮಿಸುತ್ತಿಲ್ಲ. ಈ ಸಾರಿ ಅವಕಾಶ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ನಮ್ಮ ಕಾಲೇಜು ಕರ್ನಾಟಕ ಸರ್ಕಾರ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್, ನವದೆಹಲಿಯ ಎಐಸಿಟಿಇ ಅನುಮೋದನೆ ಪಡೆದುಕೊಂಡಿದೆ. ಕ್ಯಾಂಪಸ್ ಸಂದರ್ಶನ ಮೂಲಕ ಶೇ.80ರಷ್ಟು ಉದ್ಯೋಗ ಕಲ್ಪಿಸಲಾಗುತ್ತದೆ. ಸರ್ಕಾರದ ಮಾನದಂಡ ಅನುಸಾರ ಅಂಗವಿಕಲರು ಅಂತ ಪರಿಗಣಿಸಲಾಗುತ್ತದೆ ಎಂದರು.

ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಸೈನ್ಸ್, ಜ್ಯುವೆಲರಿ ಡಿಜೈನ್, ಇಲೆಕ್ಟ್ರಾನಿಕ್ ಆಂಡ್ ಕಮ್ಯೂನಿಕೇಷನ್ ಸೈನ್ಸ್, ಅಪರೆಲ್ ಡಿಜೈನ್, ಫ್ಯಾಬ್ರಿಕೇಷನ್ ಟೆಕ್ನಾಲಜಿ ಸೇರಿದಂತೆ ವಿವಿಧ ಕೋರ್ಸ್‌ ಡಿಪ್ಲೊಮಾ ಪದವಿ ನೀಡಲಾಗುವುದು. ಗುಣಮಟ್ಟದ ಶಿಕ್ಷಣವಿದೆ. ವಸತಿ, ಊಟ ಸೌಲಭ್ಯ ಕಲ್ಪಿಸಲಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ಅಂಗವಿಕಲರಿಗೆ ತಾಂತ್ರಿಕ ಶಿಕ್ಷಣ ನೀಡಲಾಗುತ್ತಿದೆ. ಅವರದೇ ಸಜ್ಞೆ, ಭಾಷೆ, ಲಿಪಿ ಬಳಸಿ ಉಪನ್ಯಾಸಕರು ತರಬೇತಿ ನೀಡುತ್ತಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಎಂ.ಎನ್.ಶಿವಕುಮಾರ, ಮಹಾದೇವ ಪ್ರಸಾದ, ಫಳನಿಸ್ವಾಮಿ ಇದ್ದರು.

PREV

Latest Stories

ಡಿಕೆಶಿ ಪರ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಸೇವೆ
ಬೆಂಗಳೂರು-ತುಮಕೂರುಪ್ರಯಾಣ, ಜನ ಹೈರಾಣ
ಸ್ಮಾರ್ಟ್‌ ಮೀಟರ್‌ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು