ಕ್ರೀಡೆಗಳಲ್ಲಿ ವ್ಯಾಪಕ ಅವಕಾಶಗಳಿಗೆ ಬಳಸಿಕೊಳ್ಳಿ

KannadaprabhaNewsNetwork |  
Published : Feb 02, 2025, 01:01 AM IST
ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ 10ನೇ ಅಂತರ ಶಾಲೆ- ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟವನ್ನು ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕ್ರೀಡೆಗಳಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಲು ಸಾಧ್ಯ. ಕ್ರೀಡೆಗಳಲ್ಲಿ ವ್ಯಾಪಕ ಅವಕಾಶಗಳಿದ್ದು ಎಲ್ಲರೂ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕ್ರೀಡೆಗಳಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಲು ಸಾಧ್ಯ. ಕ್ರೀಡೆಗಳಲ್ಲಿ ವ್ಯಾಪಕ ಅವಕಾಶಗಳಿದ್ದು ಎಲ್ಲರೂ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಹೇಳಿದರು.

ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ದಿ ಡಾ.ಸಿ.ಆರ್.ಬಿದರಿ ಅವರ ಸ್ಮರಣಾರ್ಥ 10ನೇ ಅಂತರ ಶಾಲೆ- ಕಾಲೇಜುಗಳ ಅಥ್ಲೆಟಿಕ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡಾಕೂಟಗಳು ನಮ್ಮಲ್ಲಿರುವ ಕ್ರೀಡಾ ಸಾಮರ್ಥ್ಯ ಹೊರಹಾಕಲು ಅವಕಾಶ ಒದಗಿಸುತ್ತವೆ. ಹೀಗಾಗಿ ಪಠ್ಯಗಳ ಜೊತೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಈಗ ಆಯೋಜಿಸಲಾದ ಅಥ್ಲೆಟಿಕ್ ಕ್ರೀಡಾಕೂಟ ಅಚ್ಚುಕಟ್ಟಾಗಿದ್ದು, ಪ್ರತಿಯೊಬ್ಬರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಕುಲಪತಿ ಡಾ.ಆರ್.ಎಸ್.ಮುಧೋಳ ಮಾತನಾಡಿ, ದಿ.ಸಿ.ಆರ್.ಬಿದರಿ ಅವರು ಶ್ರೇಷ್ಟ ಕ್ರೀಡಾಪಟುವಾಗಿದ್ದರು. ಅಂತಾರಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದರು. ವಿದೇಶಗಳಲ್ಲಿ ಸಾಕಷ್ಟು ಅವಕಾಶಗಳಿದ್ದರು ವಿಜಯಪುರ ಜಿಲ್ಲೆಯಲ್ಲಿಯೇ ವೃದ್ಯ ವೃತ್ತಿ ನಡೆಸಿ ಇಲ್ಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ ಜನಾನುರಾಗಿಯಾಗಿದ್ದಾರೆ. ಅವರ ಕ್ರೀಡಾ ಪ್ರೀತಿ ಎಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ದಿ.ಡಾ.ಸಿ.ಆರ್.ಬಿದರಿ ಅವರ ಪುತ್ರ ವಿಜಯೇಂದ್ರ ಬಿದರಿ, ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ, ರಜಿಸ್ಟ್ರಾರ್‌ ಡಾ.ಆರ್.ವಿ.ಕುಲಕರ್ಣಿ, ಉಪಪ್ರಾಚಾರ್ಯ ಡಾ.ಎಂ.ಬಿ.ಪಾಟೀಲ, ಡಾ.ಶೈಲಜಾ ಬಿದರಿ, ಆಡಳಿತಾಧಿಕಾರಿ ಎಸ್.ಎಚ್.ಲಗಳಿ, ಐ.ಎಸ್.ಕಾಳಪ್ಪನವರ, ವಿಲಾಸ ಬಗಲಿ, ಬಿ.ಆರ್.ಪಾಟೀಲ, ಕ್ರೀಡಾ ಸಮಿತಿ ಉಪಾಧ್ಯಕ್ಷ ಡಾ.ಗಿರೀಶ ಕುಲ್ಲೊಳ್ಳಿ, ಬಿ.ಎಲ್.ಡಿ.ಇ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎಸ್.ಕೋರಿ, ಕೈಲಾಸ ಹಿರೇಮಠ, ಡಾ.ಅರುಣಾ ಬಿರಾದಾರ, ಡೀಮ್ಡ್ ವಿವಿಯ ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕಿ ಡಾ.ಮಹಾದೇವಿ ವಾಲಿ ಮುಂತಾದವರು ಉಪಸ್ಥಿತರಿದ್ದರು.

ಈ ಕ್ರೀಡಾಕೂಟದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ 66 ನಾನಾ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮಾಧ್ಯಮಿಕ ಶಾಲೆಗಳು, ಪದವಿ ಪೂರ್ವ ಕಾಲೇಜುಗಳ ಒಟ್ಟು 802 ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಧಾಮಿನಿ ಭಟ್‌ ಪ್ರಾರ್ಥಿಸಿದರು. ಸುದನ ನಿರೂಪಿಸಿದರು. ಡಾ.ಅರುಣಾ ಬಿರಾದಾರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!