ವಿಶ್ವಕರ್ಮ ಯೋಜನೆ ಪ್ರಯೋಜನ ಪಡೆದುಕೊಳ್ಳಿ

KannadaprabhaNewsNetwork |  
Published : Jan 12, 2024, 01:45 AM IST
ಸಭೆಯಲ್ಲಿ ಮಾಜಿ ಸಚಿವ ಎ. ರಾಮದಾಸ್‌ ಮಾತನಾಡಿದರು. | Kannada Prabha

ಸಾರಾಂಶ

ಬಿಜೆಪಿ ವಿಶ್ವದಲ್ಲೆ ಅತೀ ಹೆಚ್ಚು ಪಕ್ಷದ ಸದಸ್ಯರು ಹೊಂದಿದ ಪಕ್ಷ ಎಂದು ದಾಖಲಾಗಿದೆ, ರಾಜ್ಯ ಮತ್ತು ದೇಶದಲ್ಲಿ ಪಕ್ಷವು ದಿನದಿಂದ ದಿನಕ್ಕೆ ಸಂಘಟನೆಯಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ. ಇನ್ನೂ ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಪಕ್ಷದ ಕಾರ್ಯಕರ್ತರು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿಕೊಳ್ಳಬೇಕು. ರಾಜ್ಯದಲ್ಲಿ ಕನಿಷ್ಠ 25 ಸ್ಥಾನಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕರ್ಮ ಸಮಾಜ ಬಾಂಧವರಿಗಾಗಿ ಹಲವು ಯೋಜನೆ ಜಾರಿಗೆ ತಂದಿದ್ದು, ಸಮಾಜ ಬಾಂಧವರು ಸದುಪಯೋಗ ಪಡೆದುಕೊಳ್ಳುವಂತೆ ಮಾಜಿ ಸಚಿವ ಹಾಗೂ ವಿಶ್ವಕರ್ಮ ಯೋಜನೆ ರಾಜ್ಯ ಸಂಚಾಲಕ ಎಸ್.ಎ. ರಾಮದಾಸ್‌ ಹೇಳಿದರು.

ಅವರು ಇಲ್ಲಿನ ಹು-ಧಾ ಮಹಾನಗರ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ವಿಶ್ವಕರ್ಮ ಯೋಜನೆಯನ್ನು ಆಯಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರಿಗಾಗಿ ಸಾಲ ನೀಡುವ ಯೋಜನೆ ತಂದಿದ್ದಾರೆ. ಈಗಾಗಲೇ ಸಾಕಷ್ಟು ಜನರು ಇದರ ಪ್ರಯೋಜನ ಪಡೆಯಲು ಪ್ರಾರಂಭಿಸಿದ್ದಾರೆ.ಹೀಗೆ ಬಡವರಿಗೆ, ರೈತರಿಗೆ, ದಿನಗೂಲಿ ಕಾರ್ಮಿಕರಿಗೆ, ಕುಶಲಕರ್ಮಿಗಳಿಗೆ, ಸಾಕಷ್ಟು ಯೋಜನೆ ಜಾರಿಗೆ ತರಲಾಗಿದ್ದು, ವಿಶ್ವಕರ್ಮ ಯೋಜನೆ ಅಡಿಯಲ್ಲಿ ಫಲಾನುಭವಿಗಳು ಅರ್ಜಿ ಹಾಕಿ ಕೇಂದ್ರ ಸರ್ಕಾರದ ಸೌವಲತ್ತು ಪಡೆದುಕೊಳ್ಳಬೇಕು ಎಂದರು.

ಬಿಜೆಪಿ ವಿಶ್ವದಲ್ಲೆ ಅತೀ ಹೆಚ್ಚು ಪಕ್ಷದ ಸದಸ್ಯರು ಹೊಂದಿದ ಪಕ್ಷ ಎಂದು ದಾಖಲಾಗಿದೆ, ರಾಜ್ಯ ಮತ್ತು ದೇಶದಲ್ಲಿ ಪಕ್ಷವು ದಿನದಿಂದ ದಿನಕ್ಕೆ ಸಂಘಟನೆಯಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದೆ. ಇನ್ನೂ ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಪಕ್ಷದ ಕಾರ್ಯಕರ್ತರು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಿಕೊಳ್ಳಬೇಕು. ರಾಜ್ಯದಲ್ಲಿ ಕನಿಷ್ಠ 25 ಸ್ಥಾನಗಳನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದರು.

ಧಾರವಾಡ ವಿಭಾಗದ ಪ್ರಭಾರಿ ಲಿಂಗರಾಜ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಲಿಂಗರಾಜ ಪಾಟೀಲ ಮಾತನಾಡಿದರು. ಪಾಲಿಕೆ ಮೇಯರ್‌ ವೀಣಾ ಬರದ್ವಾಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ತಿಪ್ಪಣ್ಣ ಮಜ್ಜಗಿ, ವಿಜಯಾನಂದ ಶೆಟ್ಟಿ, ಮಂಡಲ ಅಧ್ಯಕ್ಷ ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಬಸವರಾಜ ಗರಗ, ಸುನೀಲ ಮೋರೆ, ಜಿಲ್ಲಾ ವಕ್ತಾರ ರವಿ ನಾಯಕ, ಮಹಾನಗರ ಪಾಲಿಕೆ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ