ಕಾಡುಗೊಲ್ಲ ಸಮುದಾಯವನ್ನು ಎಸ್ಟಿಗೆ ಸೇರಿಸುಲು ಸೂಕ್ತ ಕ್ರಮ ಕೈಗೊಳ್ಳಿ

KannadaprabhaNewsNetwork |  
Published : Nov 13, 2024, 12:05 AM IST
ಚಿತ್ರ 2 | Kannada Prabha

ಸಾರಾಂಶ

ಹಿರಿಯೂರು: ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚಿತ್ರದುರ್ಗದ ಶ್ರೀ ಕ್ಷೇತ್ರ ಗೊಲ್ಲಗಿರಿ ಮಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಹಿರಿಯೂರು: ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚಿತ್ರದುರ್ಗದ ಶ್ರೀ ಕ್ಷೇತ್ರ ಗೊಲ್ಲಗಿರಿ ಮಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ತಾಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿ ಗ್ರಾಮದ ಶ್ರೀ ಈರಲಿಂಗೇಶ್ವರ ಸ್ವಾಮಿ ದೇವರ ನೂತನ ದೇವಸ್ಥಾನ ನಿರ್ಮಾಣದ ಅಡಿಪಾಯ ಪೂಜೆ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.

ನಮ್ಮ ಸಮುದಾಯವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದು, ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಾತಿ ಅವಶ್ಯಕತೆಯಿದೆ. ಈಗಾಗಲೇ ಮೀಸಲಾತಿಗಾಗಿ ಸಾಕಷ್ಟು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಕಾಡುಗೊಲ್ಲ ಕಡತಗಳಲ್ಲಿ ತೊಡಕುಂಟಾಗಿರುವ ಲೋಪದೋಷಗಳನ್ನು ಸರಿಪಡಿಸಿ ರಾಜ್ಯ ಸರ್ಕಾರ ಕಡತವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ದೇಶದ ಪರಂಪರೆಯಲ್ಲಿ ದೇವಸ್ಥಾನಗಳಿಗೆ ತನ್ನದೇ ಆದಂತಹ ಸ್ಥಾನಮಾನವಿದೆ. ಅದರಲ್ಲೂ ಕಾಡುಗೊಲ್ಲರು ಅನಾದಿಕಾಲದಿಂದಲೂ ದೇವರುಗಳಿಗೆ ಅತ್ಯಂತ ಭಕ್ತಿ ಮತ್ತು ಗೌರವದಿಂದ ನಡೆಸಿಕೊಂಡು ಬರುತ್ತಿದ್ದಾರೆ. ನಾವು ಸಾಂಸ್ಕೃತಿಕ ವೀರರನ್ನೇ ದೇವರನ್ನಾಗಿ ಆರಾಧಿಸುವ ಪದ್ಧತಿ ರೂಢಿಯಲ್ಲಿದೆ. ನಾವು ಕಲೆಯಲ್ಲಿ ಶ್ರೀಮಂತಿಕೆ ಹೊಂದಿದ್ದೇವೆ ಎಂದು ತಿಳಿಸಿದರು.

ಟಿ.ಬಿ.ಗೊಲ್ಲರಹಟ್ಟಿ ಗ್ರಾಮದ ಈರಣ್ಣ ಸ್ವಾಮಿ ದೇವರಿಗೆ ಆದಿ ಪೂಜೆ ನೆರವೇರಿಸಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಗೊಂಡು ತ್ವರಿತವಾಗಿ ದೇವಾಲಯ ಪೂರ್ಣಗೊಂಡು ಲೋಕಾರ್ಪಣೆಯಾಗಲಿ ಎಂದು ಆಶಿಸಿದರು.ಈ ಸಂದರ್ಭದಲ್ಲಿ ಪೂಜಾರಿಗಳಾದ ಪೋತರಾಜ್ ಚಿಕ್ಕಣ್ಣ, ದೊಡ್ಡಯ್ಯ, ಪೂಜಪ್ಪ, ರಂಗಪ್ಪ, ಗೋಪಾಲಕೃಷ್ಣ, ಯಳಿಯಪ್ಪ, ಲಕ್ಷ್ಮಣಪ್ಪ, ನಿಜಲಿಂಗಪ್ಪ, ಮಹಾಲಿಂಗಯ್ಯ, ದೇವರಕೊಟ್ಟ ದತ್ತ ಪೀಠದ ಮುದ್ದರಂಗಪ್ಪಸ್ವಾಮಿ, ಮಸ್ಕಲ್ ವೀರೇಗೌಡ್ರು, ಧನಂಜಯ, ಮಲ್ಲಣ್ಣ, ಪೂಜಾರಿ ನರಸಿಂಹಣ್ಣ, ವೆಂಕಟೇಶ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5 ಪಾಲಿಕೆಗಳಲ್ಲಿ ಜಯಭೇರಿ ಬಾರಿಸಲು ಬಿಜೆಪಿಗೆ ಒಳ್ಳೆ ಅವಕಾಶ
ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ