ಕನ್ನಡಪ್ರಭ ವಾರ್ತೆ ಜಮಖಂಡಿ
ಬುಧವಾರ ನಡೆದ ಅಧಿವೇಶದ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಕೇವಲ ಮೂರ ರಿಂದ ನಾಲ್ಕು ಗಂಟೆಗಳ ಕಾಲ ವಿದ್ಯುತ್ ಪೂರೈಸಿರುವುದರಿಂದ ಬೆಳೆಗಳು ಒಣಗುತ್ತಿವೆ. ಕ್ಷೇತ್ರದಲ್ಲಿ ಏತನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸುವ ಮೂಲಕ ರೈತರ ಜಮೀನುಗಳಿಗೆ ನೀರು ಪೂರೈಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಮಳೆ ಪ್ರಮಾಣ ಕಡಿಮೆಯಾದ ಪರಿಣಾಮ ಆಲಮಟ್ಟಿ ಜಲಾಶಯದ ಒಳ ಹರಿವು ಇಲ್ಲವಾಗಿದೆ. ಜಲಾಶಯದಲ್ಲಿ ಸಂಗ್ರಹವಿರುವ ಹಿನ್ನಿರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೇಸಿಗೆಯಲ್ಲಿ ಜಲಾಶಯ ಖಾಲಿಯಾಗುವ ಸಂಭವವಿದೆ. ಆದ್ದರಿಂದ ಈಗಿನಿಂದಲೆ ಕುಡಿಯುವ ನೀರಿಗಾಗಿ ಕೊಯಿನಾ ಜಲಾಶಯದಿಂದ 2 ಟಿಎಂಸಿ ಯಷ್ಟು ನೀರು ಬಿಡಿಸಿಕೊಳ್ಳಲು ಸರ್ಕಾರ ಪ್ರಯತ್ನ ಮಾಡಬೇಕು. ಜನವರಿ ಹೊತ್ತಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಹೊಸ ಬೋರ್‌ವೆಲ್‌ಗಳನ್ನು ಕೊರೆಯಲು ಅನುಮತಿಯನ್ನು ನಿರಾಕರಿಸಿರುವ ಸರ್ಕಾರ ಹೊಸ ಕೊಳವೆಭಾವಿಗಳಿಗೆ ಅಗತ್ಯ ಪರವಾನಿಗೆ ನೀಡುವ ಮೂಲಕ ಬರ ಪರಿಸ್ಥಿತಿಯ ನಿರ್ವಹಣೆಗೆ ಜಿಲ್ಲಾ ಆಡಳಿತಕ್ಕೆ ಸೂಚನೆ ನೀಡಬೇಕು ಎಂದರು.