ಬಡವರ ಅಕ್ಕಿ ದುರುಯೋಗದಂತೆ ನೋಡಿಕೊಳ್ಳಿ

KannadaprabhaNewsNetwork |  
Published : Jun 25, 2025, 12:34 AM IST
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪಾಧ್ಯಕ್ಷ  ಎಸ್.ಆರ್.ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಗೊಳಿಸುವ ಮೂಲಕ ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಸೂಚಿಸಿದರು

ಕನ್ನಡಪ್ರಭ ವಾರ್ತೆ ವಿಜಯಪುರ

ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಗೊಳಿಸುವ ಮೂಲಕ ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಡವರ ಪಾಲಿನ ಅಕ್ಕಿ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ತಿಳಿಸಿದರು.

ಸರ್ಕಾರ ಅಧಿಕಾರ ವಹಿಸಿಕೊಂಡು ೨ ವರ್ಷಗಳನ್ನು ಪೂರೈಸಿದೆ. ಅಧಿಕಾರ ವಹಿಸಿಕೊಂಡ ಒಂದು ವರ್ಷದಲ್ಲಿಯೇ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಜನರಿಗೆ ಅನುಕೂಲ ಕಲ್ಪಿಸಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿದೆ. ಜಿಲ್ಲೆಯಲ್ಲಿ ಈವರೆಗೆ ಪಂಚ ಗ್ಯಾರಂಟಿ ಯೋಜನೆಯಡಿ ₹ ೩೧೭೭. ೭೮ ಕೋಟಿ ವೆಚ್ಚ ಮಾಡಲಾಗಿದೆ. ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಈ ಕುರಿತು ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಬೇಕು. ಕಟ್ಟ ಕಡೆಯ ಅರ್ಹ ಫಲಾನುಭವಿಗಳಿಗೆ ಯೋಜನೆ ಲಾಭ ದೊರಕಿಸಬೇಕು. ಪಂಚಾಯತಿ ಮಟ್ಟಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಗೃಹ ಲಕ್ಷ್ಮೀ ಯೋಜನೆಯಡಿ ಪಡೆದ ಹಣದಿಂದ ಬದುಕಿನಲ್ಲಿ ಆದ ಬದಲಾವಣೆಗಳ ಕುರಿತ ಫಲಾನುಭವಿಗಳ ಯಶೋಗಾಥೆ ಪ್ರಕಟಿಸಿ ಪ್ರಚಾರ ಕೈಗೊಳ್ಳಬೇಕು. ಯುವ ನಿಧಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.

ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್‌ಗಳಲ್ಲಿ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಪಡಿತರ ಅಂಗಡಿಗಳಲ್ಲಿ ಯೋಜನೆಗಳ ಪ್ರಚಾರ ಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು. ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ತಿಕೋಟಾ ತಾಲೂಕು ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಗುರುತಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆ ವ್ಯಾಪ್ತಿಗೊಳಪಡಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ ಬೋರಾಮಣಿ, ಉಪಾಧ್ಯಕ್ಷ ಹೊನ್ನಮಲ್ಲ ಸಾರವಾಡ, ಸುಂದರಪಾಲ ರಾಠೋಡ, ನಬಿಲಾಲ ನಾಯ್ಕೋಡಿ, ಆನಂದ ಜಾಧವ, ಮಹಾದೇವಿ ಗೋಕಾಕ, ಸದಸ್ಯರಾದ ಆರತಿ ನಾವಿ, ಸಾಹೇಬಗೌಡ ಬಿರಾದಾರ, ಮಲ್ಲಪ್ಪ ದಳವಾಯಿ, ಗುರುಪಾದಗೌಡ ದಾಶ್ಯಾಳ, ಶ್ರೀಶೈಲ ಕವಲಗಿ, ರವಿದಾಸ ಜಾಧವ, ಮೈಬೂಬಸಾಬ ನಾಯ್ಕೊಡಿ, ಸಂತೋಷ ಗಣಾಚಾರಿ, ಶಂಕರಗೌಡ ಹಿರೇಗೌಡರ, ಚಂದ್ರಶೇಖರ ಹಳೆಮನಿ, ರಾಜಶೇಖರ ಅವಜಿ, ಪ್ರಶಾಂತ ಕಾಳೆ, ಸಂಗನಗೌಡ ದೇಸಾಯಿ, ಶರಣಬಸಪ್ಪ ಚೌರ ಸೇರಿ ತಾಪಂ ಅಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ