ಪುಷ್ಪಗಿರಿ ಮಹಾಸಂಸ್ಥಾನ ಹಾಗೂ ಹಾಸನದ ಎಂ.ಎಂ.ಎಂ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಸಂಚಾರಿ ವಾಹನವನ್ನು ಆರಂಭಿಸಲಾಗಿದೆ. ಆರೋಗ್ಯವು ಪ್ರತಿಯೊಬ್ಬರ ಮೂಲಭೂತ ಅವಶ್ಯಕತೆಯಾಗಿದ್ದು, ಗ್ರಾಮೀಣ ಭಾಗದ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ದೂರದ ಊರುಗಳಿಗೆ ತೆರಳುವ ಪರಿಸ್ಥಿತಿ ತಪ್ಪಿಸಲು ಈ ಯೋಜನೆ ಆರಂಭಿಸಲಾಗಿದೆ ಎಂದರು. ಸಂಚಾರಿ ಆಸ್ಪತ್ರೆಯ ಮೂಲಕ ಪ್ರತಿದಿನ ಸುಮಾರು ೧೦ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ತಪಾಸಣೆ, ಪ್ರಾಥಮಿಕ ಚಿಕಿತ್ಸೆ, ಅಗತ್ಯ ವೈದ್ಯಕೀಯ ಸಲಹೆ ಹಾಗೂ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಾಗುವುದು. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಹಳೇಬೀಡು
ಗ್ರಾಮಾಂತರ ಪ್ರದೇಶದ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಸಂಚಾರಿ ಆಸ್ಪತ್ರೆ ವಾಹನ ಹೆಚ್ಚಿನ ಅನುಕೂಲವಾಗಲಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.ಹಳೇಬೀಡಿನ ಶ್ರೀ ಹೊಯ್ಸಳೇಶ್ವರ ದೇವಾಲಯದ ಆವರಣದಲ್ಲಿ ಸಂಚಾರಿ ಆಸ್ಪತ್ರೆಯ ವಾಹನವನ್ನು ಉದ್ಘಾಟಿಸಿ ಮಾತನಾಡುತ್ತಾ, ಪುಷ್ಪಗಿರಿ ಮಹಾಸಂಸ್ಥಾನ ಹಾಗೂ ಹಾಸನದ ಎಂ.ಎಂ.ಎಂ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಸಂಚಾರಿ ವಾಹನವನ್ನು ಆರಂಭಿಸಲಾಗಿದೆ. ಆರೋಗ್ಯವು ಪ್ರತಿಯೊಬ್ಬರ ಮೂಲಭೂತ ಅವಶ್ಯಕತೆಯಾಗಿದ್ದು, ಗ್ರಾಮೀಣ ಭಾಗದ ಜನರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ದೂರದ ಊರುಗಳಿಗೆ ತೆರಳುವ ಪರಿಸ್ಥಿತಿ ತಪ್ಪಿಸಲು ಈ ಯೋಜನೆ ಆರಂಭಿಸಲಾಗಿದೆ ಎಂದರು. ಸಂಚಾರಿ ಆಸ್ಪತ್ರೆಯ ಮೂಲಕ ಪ್ರತಿದಿನ ಸುಮಾರು ೧೦ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ತಪಾಸಣೆ, ಪ್ರಾಥಮಿಕ ಚಿಕಿತ್ಸೆ, ಅಗತ್ಯ ವೈದ್ಯಕೀಯ ಸಲಹೆ ಹಾಗೂ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸಲಾಗುವುದು. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.ಈ ಸಂಚಾರಿ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರು, ನರ್ಸ್ ಹಾಗೂ ಲ್ಯಾಬ್ ತಂತ್ರಜ್ಞರು ಕಾರ್ಯನಿರ್ವಹಿಸಲಿದ್ದು, ಗ್ರಾಮೀಣ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯಲಿದೆ ಎಂದು ತಿಳಿಸಿದರು. ಮಾಜಿ ಶಾಸಕ ಕೆ. ಎಸ್. ಲಿಂಗೇಶ್ ಮಾತನಾಡುತ್ತಾ, ನಮ್ಮ ಶ್ರೀಗಳು ಇರುವುದು ಅದೃಷ್ಟದ ಒಂದು ಸಂಕೇತ. ಇವರು ಹಲವಾರು ಗ್ರಾಮಾಂತರ ಜನತೆಗೆ ಗ್ರಾಮೀಣ ಅಭಿವೃದ್ಧಿ ಬ್ಯಾಂಕು ಹಾಗೂ ನೀರಿಗಾಗಿ ಹೋರಾಟ, ಶೈಕ್ಷಣಿಕ ಪ್ರಗತಿ, ಸಾವಯವ ಕೃಷಿ ಪದ್ದತಿ, ಬಡ ಜನತೆಗೆ ಸಂಚಾರಿ ಆಸ್ಪತ್ರೆ ಒದಗಿಸಿರುವುದು ತುಂಬಾ ಸಂತೋಷದ ವಿಚಾರ. ನಮ್ಮ ರಾಜ್ಯದಲ್ಲಿ ಹಲವಾರು ಮಠಮಾನ್ಯಗಳು ಇದ್ದರೂ ಜನೋಪಯೋಗಿ ಕೆಲಸ ಮಾಡುವ ಮಠಗಳ ಸಂಖ್ಯೆ ಕಡಿಮೆಯೇ. ಈ ನಿಟ್ಟಿನಲ್ಲಿ ನಮ್ಮ ಶ್ರೀಗಳು ಜನತೆಯ ಪ್ರಗತಿ ಬಗ್ಗೆ ಯೋಚನೆ ಮಾಡಿದ ಅಪರೂಪದ ಆದರ್ಶ ವ್ಯಕ್ತಿ. ಇವರ ಚಿಂತನೆ ಸದಾ ಶಾಶ್ವತವಾಗಿ ಉಳಿಯಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಬಿ. ಎಸ್ ಸೋಮಶೇಖರ್, ರೈತ ಮುಖಂಡರ ಕೆ.ಪಿ ಕುಮಾರ್ ಗಡಿ ಕುಮಾರ್ ಹಾಗೂ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಧು, ಪಿಡಿಒ ವಿರೂಪಾಕ್ಷ, ಯೋಜನೆ ಅಧಿಕಾರಿ ವಿನುತಾ ,ಶಿಕ್ಷಕ ಮಲ್ಲಿಕಾರ್ಜನ್ ಭೈರೇಶ್ ಟೀ ಧರ್ಮಣ್ಣ, ರಾಜಣ್ಣ ಹಾಗೂ ಗ್ರಾಪಂ ಮಾಜಿ ಸದಸ್ಯರು ಹಾಗೂ ಸ್ವಸಹಾಯ ಮಹಿಳಾ ಸಂಘ, ಹಲವಾರು ಊರಿನ ಮುಖಂಡರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.