ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾ ವಹಿಸಿ

KannadaprabhaNewsNetwork |  
Published : Mar 25, 2026, 04:15 AM IST
ಇಂಡಿ | Kannada Prabha

ಸಾರಾಂಶ

ನಗರದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಟಾಸ್ಕ್ ಫೋರ್ಸ್ ಸಭೆ ಜರುಗಿತು.

ಕನ್ನಡಪ್ರಭ ವಾರ್ತೆ ಇಂಡಿ

ನಗರದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಟಾಸ್ಕ್ ಫೋರ್ಸ್ ಸಭೆ ಜರುಗಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಯಾವುದೇ ಶಾಲೆಗಳಲ್ಲಿ ಹಾಗೂ ಹಾಸ್ಟೆಲ್‌ಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು. ಬೇಸಿಗೆಯಲ್ಲಿ ಯಾವುದೇ ಗ್ರಾಮ, ಜನವಸತಿ ಪ್ರದೇಶಗಳಿಗೆ ನೀರಿನ ಅಭಾವವಾಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉದ್ಭವಿಸಬಹುದಾದ ಸ್ಥಳಗಳ ಕುರಿತು ಮುಂಚಿತವಾಗಿ ತಿಳಿದುಕೊಂಡು ಮಾಹಿತಿ ಸಲ್ಲಿಸಬೇಕು. ನಗರ ನೀರು ಸರಬರಾಜಿಗೆ ಸಂಬಂಧಿಸಿದ ಅಗತ್ಯ ಮುಜಾಗೃತಾ ಕ್ರಮವಹಿಸಬೇಕು. ಗ್ರಾಮ ಪಂಚಾಯತಿ ಹಂತದಲ್ಲಿಯೂ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ತಾಪಂ ಇಒ ಡಾ.ಭೀಮಾಶಂಕರ ಕನ್ನೂರ ಮಾತನಾಡಿ, ಮಿರಗಿ, ಮಸಳಿ, ಗುಬ್ಬೇವಾಡ, ಕೊಳುರಗಿ, ಝಳಕಿ, ಬಸನಾಳ, ಬಬಲಾದ, ನಿಂಬಾಳ ಕೆಡಿ, ಸಾಲೋಟಗಿ, ಅಡವಿ ವಸ್ತಿಗಳು ಇನ್ನೂ ಕೆಲವು ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಿ, ಯಾವುದೇ ಸಮಸ್ಯೆ ಆಗದಂತೆ ಮುಜಾಗ್ರತೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಬಾರದಂತೆ ಖುದ್ದಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಕೆಬಿಜೆಎನ್ಎಲ್ ಇಇ ಮನೋಜಕುಮಾರ ಗಡಬಳ್ಳಿ, ಪೌರಾಯುಕ್ತ ಶಿವಾನಂದ ಪೂಜಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಎಇಇ ಆರ್.ಎಸ್.ಬಂಡಿ, ಸಹಾಯಕ ನಿರ್ದೇಶಕರು (ಪಂ ರಾ) ಪ್ರಕಾಶ ರಾಠೋಡ, ಯೋಜನಾಧಿಕಾರಿ ನಂದೀಪ ರಾಠೋಡ, ಹೆಸ್ಕಾಂ ಎಇಇ ಎಸ್.ಆರ್.ಮೆಂಡೆಗಾರ ಸೇರಿದಂತೆ ತಾಲೂಕುಮಟ್ಟದ ಅಧಿಕಾರಿಗಳು ಹಾಗೂ ಪಿಡಿಒ ಅವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ವರಲ್ಲಿಯೂ ಸಮಾನತೆ ಸಾರಿದ ದೇವರ ದಾಸಿಮಯ್ಯನವರು: ಶ್ರೀಶೈಲ ದಬಾಡಿ
ವಿಶ್ವಕರ್ಮರು ದೇಶದ ಪ್ರಾಚೀನ ಕುಶಲಕರ್ಮಿ ಸಮಾಜ: ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ