ಇಂಡಿ: ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ದುಡಿದು ಪಕ್ಷದ ಗೆಲುವಿಗೆ ಸಹಕರಿಸಬೇಕು. ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ-ಮನೆಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೂಚಿಸಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ಕ್ಷೇತ್ರದಲ್ಲಿ ಬಿಜೆಪಿಯ 54 ಶಕ್ತಿ ಕೇಂದ್ರಗಳಿದ್ದು, 8 ಮಹಾಶಕ್ತಿ ಕೇಂದ್ರಗಳಿವೆ. ಆಯಾ ಶಕ್ತಿ ಕೇಂದ್ರದ ಪದಾಧಿಕಾರಿಗಳು ಮನೆಮನೆಗೆ ಸರ್ಕಾರದ ಸಾಧನೆ ಹಾಗೂ ಮೋದಿಯವರ ಆಡಳಿತದ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದರು.ಸಂಸದ ರಮೇಶ ಜಿಗಜಿಣಗಿ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃಧ್ಧಿ ಕಾರ್ಯ ಕೈಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳು, ರೈಲು ನಿಲ್ದಾಣಗಳ ಮೇಲ್ದರ್ಜೆಗೇರಿಸಿ ಅಭಿವೃಧ್ಧಿಗೊಳಿಸುವುದು, ನೀರಾವರಿ ಯೋಜನೆ ಸೇರಿದಂತೆ ಅಭಿವೃಧ್ಧಿ ಕಾರ್ಯಗಳು ಎಂದು ಹಿಂದೆ ಬಿದ್ದಿಲ್ಲ. ಹೀಗಾಗಿ, ಈ ಬಾರಿ 2 ಲಕ್ಷ ಮತಗಳ ಅಂತರದಿಂದ ಜಿಗಜಿಣಗಿ ಅವರ ಗೆಲುವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಗೋಷ್ಠಿಯಲ್ಲಿ ಅಶೋಕ ಅಲ್ಲಾಪೂರ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಸಿದ್ದಲಿಂಗ ಹಂಜಗಿ, ಅನಿಲ ಜಮಾದಾರ, ದೇವೆಂದ್ರ ಕುಂಬಾರ, ಅನಿಲ ಜಮಾದಾರ, ಹಣಮಂತ್ರಾಯಗೌಡ ಪಾಟೀಲ, ಅನಿಲಗೌಡ ಬಿರಾದಾರ, ಮಹಾದೇವ ರಜಪೂತ, ರಾಘವೇಂದ್ರ ಕಾಪಸೆ, ಶಾಂತು ಕಂಬಾರ, ಸಂಜು ದಶವಂತ, ಧರ್ಮರಾಜ ಮದರಖಂಡಿ ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.