ಕನ್ನಡಪ್ರಭ ವಾರ್ತೆ ಗದಗ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2026-27ನೇ ಸಾಲಿನ ಅನುಷ್ಠಾನ ಹಾಗೂ ಪ್ರಗತಿ ಕುರಿತು ಜರುಗಿದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಅರ್ಹ ರೈತ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಪ್ರಮುಖ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಯಾವುದೇ ವಿಳಂಬವಿಲ್ಲದೆ ತಲುಪುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ರೈತರ ಆಧಾರ್, ಬ್ಯಾಂಕ್ ಖಾತೆ ಹಾಗೂ ಇತರ ಅಗತ್ಯ ದಾಖಲೆಗಳಲ್ಲಿನ ಮಾಹಿತಿಯು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಅರ್ಹ ರೈತರು ಯೋಜನೆಯ ಸೌಲಭ್ಯದಿಂದ ವಂಚಿತರಾಗದಂತೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.ರೈತರಿಗೆ ಯೋಜನೆಯ ಕುರಿತು ಯಾವುದೇ ಗೊಂದಲ ಅಥವಾ ಸಮಸ್ಯೆ ಎದುರಾದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಿ ಸಮಸ್ಯೆ ಪರಿಹರಿಸಬೇಕು. ಫಲಾನುಭವಿಗಳ ಅರ್ಹತೆ, ದಾಖಲೆಗಳ ಪರಿಶೀಲನೆ ಹಾಗೂ ಯೋಜನೆಯ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸುವ ಮೂಲಕ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಪಾಡಬೇಕು. ಕೃಷಿ ಇಲಾಖೆ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಯೋಜನೆಯ ಉದ್ದೇಶ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಈ ವೇಳೆ ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ, ಹಿಂಗಾರು ಹಂಗಾಮಿನ ಬೀಜ ವಿತರಣೆ ಕಾರ್ಯಕ್ರಮ ಕುರಿತು ಚರ್ಚಿಸಲಾಯಿತು.