ರಸ್ತೆ ಅಪಘಾತ ಸಂಭವಿಸದಂತೆ ಕ್ರಮಕೈಗೊಳ್ಳಿ

KannadaprabhaNewsNetwork |  
Published : Feb 16, 2024, 01:47 AM IST
ವಿಜಯಪುರದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ರಸ್ತೆ ಸುರಕ್ಷತಾ ಸಮಿತಿ ಸಭೆಯ ನಡೆಸಿದರು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪೊಲೀಸರಿಗೆ ಸೂಚನೆಯನ್ನ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪೊಲೀಸರಿಗೆ ಸೂಚನೆಯನ್ನ ನೀಡಿದ್ದಾರೆ. ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸಿಕೊಂಡು ರಸ್ತೆ ಸುರಕ್ಷತ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಬೇಕು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿಯಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಾಹನ ಸವಾರರು ಕಡ್ಡಾಯವಾಗಿ ರಸ್ತೆ ನಿಯಮಗಳನ್ನು ಪಾಲಿಬೇಕು, ರಸ್ತೆಗಳ ಸುಧಾರಣೆ ಮಾಡಬೇಕು, ವೈಜ್ಞಾನಿಕವಾಗಿ ರಸ್ತೆಗಳನ್ನು ನಿರ್ಮಿಸಬೇಕು, ಅಪಘಾತ ತಡೆಗೆ ಸಂಬಂಧಿಸಿದ ಇಲಾಖೆಗಳು ಪೂರ್ವ ಸಿದ್ಧತಾ ಕ್ರಮ ತೆಗೆದುಕೊಂಡು ಅಪಘಾತ ತಡೆಯುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ತುರ್ತು ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ಸೇವೆ ಒದಗಿಸಬೇಕು. ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ರಸ್ತೆ ನಿಮಯಗಳ ಬಗ್ಗೆ ತಿಳಿಸಬೇಕು. ಸಾರಿಗೆ ನಿಮಯಗಳ ಉಲ್ಲಂಘನೆ ಆಗದಂತೆ ಸಂಬಂಧಿಸಿದ ಇಲಾಖೆಗಳು ನಿಗಾ ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟ್ಟಣ ಸಂಪರ್ಕಿಸುವ ಕಡೆ ಅಗತ್ಯ ಮಾಹಿತಿ ಫಲಕ ಅಳವಡಿಸಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ಅಪಾಯದ ಸೂಚನೆಯ ಮಾಹಿತಿ ಫಲಕ ಅಳವಡಿಸುವಂತೆ ಸೂಚಿಸಿದರು.

ನಗರದಲ್ಲಿ ಉಂಟಾಗುವ ಸಂಚಾರ ದಟ್ಟಣೆ ತಡೆಯಲು ಅಗತ್ಯವಿರು ಕಡೆಗಳಲ್ಲಿ ರಸ್ತೆ ಸಿಗ್ನಲ್ ದೀಪಗಳನ್ನು ಅಳವಡಿಕೆ ಮಾಡಿ, ಮುಖ್ಯ ರಸ್ತೆಯಲ್ಲಿರುವ ಶಾಲೆಗಳಲ್ಲಿ ವಿದ್ಯಾರ್ಥಿಗಳು ಆಗಮನ ಹಾಗೂ ನಿರ್ಗಮನ ಸಮಯದಲ್ಲಿ ಸಂಚಾರ ನಿಯಮಗಳ ಪಾಲನೆಯಾಗುವಂತೆ ಅರಿವು ಮೂಡಿಸಲು ಡಿಸಿ ಸೂಚನೆ ನೀಡಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ತನಹಳ್ಳಿ, ಲೊಕೋಪಯೋಗಿ ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಕೋಟ್..ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸಮಿಕ್ಷೆ ನಡೆಸಿ, ಅಪಘಾತ ತಡೆಗಟ್ಟುವ ವಿಧಾನಗಳನ್ನು ಅನುಸರಿಸಿ, ವೇಗದ ಮಿತಿ, ರಸ್ತೆ ತಿರುವು, ಅಡ್ಡ ರಸ್ತೆ ಹಾಗೂ ಮುನ್ನೆಚರಿಕೆಗಳ ಬಗ್ಗೆ ನಾಮಫಲಕಗಳನ್ನು ಕಾಣುವಂತೆ ಕಡ್ಡಾಯವಾಗಿ ಅಳವಡಿಸಿ.

ಟಿ.ಭೂಬಾಲನ್, ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪೊಲೀಸರಿಗೆ ಸೂಚನೆಯನ್ನ ನೀಡಿದ್ದಾರೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ