ಜನರಿಗೆ ಕುಡಿಯುವ ನೀರು, ಇತರೆ ಸಮಸ್ಯೆಯಾಗದಂತೆ ಕ್ರಮವಹಿಸಿ: ಡಿಸಿ ಶುಭ ಕಲ್ಯಾಣ್

KannadaprabhaNewsNetwork |  
Published : Nov 03, 2026, 01:30 AM IST
ಫೋಟೋ 30ಪಿವಿಡಿ4ಪಾವಗಡ,ತಾಲೂಕಿನಲ್ಲಿ ಬರ ವ್ಯಾಪಕವಾಗಿದ್ದು ಕೂಡಲೇ ಸಮಸ್ಯೆ ನಿವಾರಿಸುವಂತೆ ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಅವರಿಗೆ ತಾ,ಬಿಜೆಪಿ ಮುಖಂಡ ಮುರಳೀ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.30ಪಿವಿಜಿ3ಸತತ ಮಳೆಯ ಅಭಾವದಿಂದ ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದ ಹಿನ್ನೆಲೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಪಾವಗಡದ ಹಲವು ಗ್ರಾಮಗಳಿಗೆ ಭೇಟಿ ನೀಡಿ ಬರ ನಿರ್ವಹಣಾ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಹಾಗೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಕುಡಿಯುವ ನೀರು ಹಾಗೂ ಮೇವಿಗೆ ಅಭಾವ ಸೃಷ್ಟಿಯಾಗಿದೆ. ಮಳೆಗಾಲ ಹಾಗೂ ತೋಟಗಾರಿಕೆ ಬೆಳೆಗಳು ನಲಕಚ್ಚಿ ತೀವ್ರ ಸಮಸ್ಯೆ ಎದುರಾಗಿದೆ. ಬರ ಪರಿಹಾರ ಹಣ ಬಿಡುಗಡೆಗೊಳಿಸುವತ್ತ ಸರ್ಕಾರ ಕ್ರಮವಹಿಸಬೇಕೆಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಪಾವಗಡ

ಮಳೆ ಕೊರತೆ ಪರಿಣಾಮ ತಾಲೂಕು ಸೇರಿ ಜಿಲ್ಲೆಯಲ್ಲಿ ಬರಗಾಲವಿದ್ದು, ಜನಸಾಮಾನ್ಯರಿಗೆ ಕುಡಿಯುವ ನೀರು ಹಾಗೂ ಇತರೆ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು ಮತ್ತು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಜನತೆ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಶುಭಾ ಕಲ್ಯಾಣ್ ಅವರು ಪಾವಗಡದ ಹಲವು ಗ್ರಾಮಗಳಿಗೆ ಭೇಟಿ ನೀಡಿ ಬರ ನಿರ್ವಹಣಾ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ, ರಾಜವಂತಿ ಗ್ರಾಮದಲ್ಲಿ ನೂತನ ಕೊಳವೆಬಾವಿ ಪರಿಶೀಲಿಸಿದರು. ರಾಜವಂತಿ ಅಭಿವೃದ್ಧಿ, ನೀರಿನ ಪ್ರಭಾವ ಹಾಗೂ ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು.ಇದೇ ವೇಳೆ ರೈತರ ಜಮೀನುಗಳಿಗೆ ಭೇಟಿ ನೀಡಿ ಹಾನಿ ಪರಿಶೀಲಿಸಿದರು. ನಂತರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕಿನ ಎಲ್ಲಾ 14 ಇಲಾಖೆಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಬರ ಪರಿಸ್ಥಿತಿ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗದಂತೆ ಪರಿಸ್ಥಿತಿ ಮೊದಲೇ ಅರಿತು ಪರಿಹರಿಸಬೇಕು. ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಹಾಗೂ ಉಪ ತಹಸೀಲ್ದಾರ್ ನೇತೃತ್ವದಲ್ಲಿ ಸಿಬ್ಬಂದಿ ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.

ತಾಲೂಕಿನಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗಬಾರದು, ಸಮಸ್ಯೆಗಳಿದ್ದರೆ ನೇರವಾಗಿ ಕರೆ ಮಾಡಿ ಪರಿಹಾರ ಪಡೆಯಲು ನೆರವಿಗೆ ಜಿಲ್ಲಾ ಮಟ್ಟದ 24 ಗಂಟೆಗಳ ದೂರವಾಣಿ ಸಂಖ್ಯೆ 0816- 2213400 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿತಿಳಿಸಿದರು.ತಾಲೂಕು ಬಿಜೆಪಿ ಮುಖಂಡರಾದ ಪಾವಗಡ ಮುರಳೀ ಮಾತನಾಡಿ, ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಹಾಗೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಕುಡಿಯುವ ನೀರು ಹಾಗೂ ಮೇವಿಗೆ ಅಭಾವ ಸೃಷ್ಟಿಯಾಗಿದೆ. ಮಳೆಗಾಲ ಹಾಗೂ ತೋಟಗಾರಿಕೆ ಬೆಳೆಗಳು ನಲಕಚ್ಚಿ ತೀವ್ರ ಸಮಸ್ಯೆ ಎದುರಾಗಿದೆ. ಬರ ಪರಿಹಾರ ಹಣ ಬಿಡುಗಡೆಗೊಳಿಸುವತ್ತ ಸರ್ಕಾರ ಕ್ರಮವಹಿಸಬೇಕೆಂದು ಒತ್ತಾಯಿಸಿದರು.ಸರ್ಕಾರಿ ವ್ಯಾಪ್ತಿಗೆ ಒಳಪಟ್ಟ ತಾಲೂಕಿನ ಶ್ರೀ ಸುಬ್ರಮಣ್ಯಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಹಾಗೂ ಇತರೆ ಬರ ಸ್ಥಿತಿಯ ಸಮಸ್ಯೆ ನಿವಾರಿಸುವಂತೆ ಮನವಿ ಮಾಡಿದರು.ತಹಸೀಲ್ದಾರ್ ವೈ.ರವಿ, ತಾಪಂ ಇಒ ಮಧುಸೂದನ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಬಸವಲಿಂಗಪ್ಪ, ಕೃಷಿ ಇಲಾಖೆ ಅಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ