ಶುದ್ಧ ಕುಡಿವ ನೀರು ಒದಗಿಸಲು ಕ್ರಮವಹಿಸಿ

KannadaprabhaNewsNetwork |  
Published : Jul 03, 2026, 02:15 AM IST
ಭುವನೇಶ ಪಾಟೀಲ | Kannada Prabha

ಸಾರಾಂಶ

ಜನರು ಕುಡಿಯುವ ನೀರು ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಸಾರ್ವಜನಿಕರು ಬೋರ್‌ವೆಲ್ ನೀರನ್ನು ಕುಡಿಯಲು ಬಳಕೆ ಮಾಡುತ್ತಿದ್ದರೆ, ಸೂಚನಾ ಫಲಕ ಅಳವಡಿಸಬೇಕಾಗುತ್ತದೆ. ಕಲುಷಿತ ನೀರು ಪೂರೈಕೆ ಮಾಡುತ್ತಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು.

ಧಾರವಾಡ:

ಗ್ರಾಮೀಣ ಭಾಗದ ಜನರು ಕುಡಿಯುವ ನೀರಿನ ಗುಣಮಟ್ಟವನ್ನು ಕಾಲ-ಕಾಲಕ್ಕೆ ಪರಿಶೀಲಿಸಬೇಕು. ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಪಂ ಸಿಇಒ ಭುವನೇಶ ಪಾಟೀಲ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾಮಟ್ಟದ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಹಾಗೂ ಜಿಲ್ಲಾ ತಾಂತ್ರಿಕ ಅನುಮೋದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರು ಕುಡಿಯುವ ನೀರು ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದು ವೇಳೆ ಸಾರ್ವಜನಿಕರು ಬೋರ್‌ವೆಲ್ ನೀರನ್ನು ಕುಡಿಯಲು ಬಳಕೆ ಮಾಡುತ್ತಿದ್ದರೆ, ಸೂಚನಾ ಫಲಕ ಅಳವಡಿಸಬೇಕಾಗುತ್ತದೆ. ಕಲುಷಿತ ನೀರು ಪೂರೈಕೆ ಮಾಡುತ್ತಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು. ಶಾಲೆ, ಅಂಗನವಾಡಿ ಹಾಗೂ ಮನೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದರು.

ಶುದ್ಧ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಈಗಾಗಲೇ ದುರಸ್ತಿ ಮಾಡುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಒಂದು ವಾರದೊಳಗೆ ದುರಸ್ತಿ ಕಾರ್ಯ ಪೂರ್ಣಗೊಳಿಸಬೇಕು. ದುರಸ್ತಿ ಕಾರ್ಯ ಕೈಗೊಳ್ಳದ ಗುತ್ತಿಗೆದಾರರನ್ನು ತೆಗೆದು ಹಾಕಲಾಗುವುದು. ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಾಮರ್ಶೆ ಮಾಡಬೇಕು. ಮೇಲ್ಮಟ್ಟದ ಕುಡಿಯುವ ನೀರಿನ ಟ್ಯಾಂಕ್‌ ಸ್ವಚ್ಛಗೊಳಿಸಬೇಕು ಎಂದು ತಿಳಿಸಿದರು.

ತಾಲೂಕು ಮಟ್ಟದ ಸಭೆಗಳಿಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದಲ್ಲಿ, ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು. ಮುಂದಿನ ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್‌ ಜಗದೀಶ ಪಾಟೀಲ, ಡಿಎಚ್‌ಒ ಡಾ. ಪರಶುರಾಮ ಎಫ್.ಕೆ., ಡಾ. ಕಮಲಾ ಬೈಲೂರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಹರು ಮತದಾರ ಪಟ್ಟಿಯಲ್ಲಿ ಉಳಿಯಲಿ
ಫ.ಗು.ಹಳಕಟ್ಟಿಯಿಂದ ವಚನಗಳಿಗೆ ಶಾಶ್ವತ ಅಸ್ತಿತ್ವ