ಅರ್ಥಪೂರ್ಣವಾಗಿ ದಸರಾಗೆ ಅಗತ್ಯ ಕ್ರಮವಹಿಸಿ: ಜುಬಿನ್‌ ಮೊಹಾಪಾತ್ರ

KannadaprabhaNewsNetwork |  
Published : Sep 30, 2026, 01:30 AM IST
29ಕೆಪಿಆರ್‌ಸಿಆರ್‌ 03:  | Kannada Prabha

ಸಾರಾಂಶ

ಪಾಲಿಕೆಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ನಾಡ ಹಬ್ಬ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು, ಪ್ರಸ್ತುತ ದಿನಗಳಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಮಾರ್ಗ ಸೂಚಿಗಳನ್ನು ಪಾಲಿಸುವುದರ ಮುಖಾಂತರ ನಗರದಲ್ಲಿ ಅರ್ಥಪೂರ್ಣ ಹಾಗೂ ಸಡಗರದಿಂದ ದಸರಾ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪಾಲಿಕೆ ಆಯುಕ್ತ ಜುಬಿನ್‌ ಮೊಹಾಪಾತ್ರ ಸೂಚಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಪಾಲಿಕೆಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ನಾಡ ಹಬ್ಬ ದಸರಾವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು, ಪ್ರಸ್ತುತ ದಿನಗಳಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಮಾರ್ಗ ಸೂಚಿಗಳನ್ನು ಪಾಲಿಸುವುದರ ಮುಖಾಂತರ ನಗರದಲ್ಲಿ ಅರ್ಥಪೂರ್ಣ ಹಾಗೂ ಸಡಗರದಿಂದ ದಸರಾ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಪಾಲಿಕೆ ಆಯುಕ್ತ ಜುಬಿನ್‌ ಮೊಹಾಪಾತ್ರ ಸೂಚಿಸಿದರು.

ಸ್ಥಳೀಯ ಮಹಾನಗರ ಪಾಲಿಕೆಯ ಜೋನಲ್ 01ರ (ಹಳೆ ಸಿಎಂಸಿ) ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಸರಾ ಹಬ್ಬದ ಅಂಗವಾಗಿ ಅ.20ರ ಬೆಳಗ್ಗೆ 12:30 ಗಂಟೆಗೆ ರಾಯಚೂರು ಮಹಾನಗರ ಪಾಲಿಕೆ ಜೋನಲ್ 01ರ ಕಚೇರಿಯಿಂದ ಮೆರವಣಿಗೆಯನ್ನು ಪ್ರಾರಂಭ ಮಾಡಿ,ಸಾಯಂಕಾಲ 6 ಗಂಟೆಗೆ ಬನ್ನಿ ಮಂಟಪ ತಲುಪುವುದು. ಇದಕ್ಕಾಗಿ ನಾಡದೇವಿ ಮಾತೆಯ ಭಾವಚಿತ್ರ ಮೆರವಣಿಗೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಬನ್ನಿ ಮಂಟಪದಲ್ಲಿ ದೀಪಾಲಂಕಾರ, ಶ್ಯಾಮಿಯಾನ್, ಚೆರ್ ಮತ್ತು ಕಚೇರಿಯಲ್ಲಿ ಶಾಮಿಯಾನ, ಚೇರ್, ದೀಪಾಲಂಕಾರ ಹಾಗೂ ಮೆರವಣಿಗೆಯಲ್ಲಿ ಸೌಂಡ್ ಸಿಸ್ಟಮ್ ವ್ಯವಸ್ಥೆಯನ್ನು ಕೈಗೊಳ್ಳಬೇಕು. ದಸರಾ ಮೆರವಣಿಗೆಯಲ್ಲಿ ಸರ್ಕಾರಿ ಅಥವಾ ಖಾಸಗಿ ಶಾಲೆಗಳಿಂದ ಸಂಬಂಧಪಟ್ಟ ಶಿಕ್ಷಕರ ವತಿಯಿಂದ ತಂಡವನ್ನು ರಚಿಸಿ ಸುಮಾರು 15 ಗುಂಪುಗಳನ್ನು (ತಂಡ) ರಚಿಸಲು ಸೂಕ್ತ ನಿರ್ದೇಶನವನ್ನು ಆಯಾ ಶಾಲೆಯ ಮುಖ್ಯಸ್ಥರಿಗೆ ನೀಡಬೇಕು. ಈ ದಸರಾ ಮೆರವಣಿಗೆಯಲ್ಲಿ ಸಾಂಸ್ಕೃತಿ ಕಲಾಪ್ರದರ್ಶನ ಮಾಡಬೇಕೆಂದರು.

ದಸರಾ ಆಚರಣೆಗೆ ರಾಯಚೂರು ಸಾರ್ವಜನಿಕರು ಸೂಕ್ತ ಸಲಹೆಗಳನ್ನು ನೀಡುವ ಮೂಲಕ ಜೊತೆಗೆ ತಾವೂ ಕೂಡ ಕೈಜೋಡಿಸಿ ಹೇಗೆ ಸಹಾಯ ಮಾಡಬಹುದು ಎಂಬುದನ್ನು ತಿಳಿಸಬೇಕು. ಬರಗಾಲದ ಪರಿಸ್ಥಿತಿ ಮತ್ತು ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವಿವಿಧ ಸಮಸ್ಯೆಗಳನ್ನು ಗುರುತಿಸಿ ಅವುಗಳಿಗೆ ಪರಿಹಾರ ನೀಡಲಾಗುವುದು. ಅಲ್ಲದೆ ಮೂಲಭೂತ ಸೌಕರ್ಯಗಳಿಗೆ ಪಾಲಿಕೆಯ ಅನುದಾನ ಲಭ್ಯತೆಗೆ ತಕ್ಕಂತೆ ಕೆಲಸಗಳಿಗೆ ಪ್ಲಾನ್ ಮಾಡಬೇಕಾಗುತ್ತದೆ ಎಂದರು.

ಸದರಿ ದಿನಾಂಕದಂದು ಮಹಾನಗರ ಪಾಲಿಕೆಯ ಸಿಬ್ಬಂದಿ ವರ್ಗದವರು, ಶಾಲೆಯ ಶಿಕ್ಷಕರು, ಶಾಲೆಯ ಮಕ್ಕಳು ಈ ಮೆರವಣಿಗೆಯಲ್ಲಿ ಭಾಗವಹಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸ್ಥಳೀಯ ಕಲಾತಂಡಗಳಿಂದ ಕನಿಷ್ಠ 15 ಕಲಾ ತಂಡವನ್ನು ಆಹ್ವಾನಿಸಿ ಮೆರವಣಿಗೆಯಲ್ಲಿ ಪ್ರದರ್ಶನ ನೀಡಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ದೀಪ ಅಲಂಕಾರ ಮತ್ತು ವಿವಿಧ ಅಲಂಕಾರ ಮಾಡಬೇಕು. ಸದರಿ ಮೆರವಣಿಗೆಯಲ್ಲಿ ರಥ ಮತ್ತು ರಥಕ್ಕೆ ಅಲಂಕಾರ ವ್ಯವಸ್ಥೆ ಮಾಡಿ, ಸ್ವ-ಸಹಾಯ ಗುಂಪುಗಳಿಂದ 200 ಮಹಿಳೆಯರ 2 ತಂಡಗಳು ಕುಂಭಮೇಳ ಜರುಗಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಪಾಲಿಕೆ ವಿವಿಧ ವಿಭಾಗಗಳ ಅಧಿಕಾರಿ, ಸಿಬ್ಬಂದಿ, ಮುಖಂಡರು,ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಾಯಿ ಮಕ್ಕಳ ಆರೈಕೆ, ಗುಣಮಟ್ಟದ ಸೇವೆ ನಿಗಾವಹಿಸಿ: ಡಾ.ರಜನಿ ಎಂ
ಪ್ರವಾಸಿ ತಾಣಗಳನ್ನು ಉಳಿಸಿ, ಬೆಳೆಸುವುದು ಆದ್ಯ ಕರ್ತವ್ಯ: ಜಿಲ್ಲಾಧಿಕಾರಿ ಪೂವಿತಾ