ಮಲ್ಪೆ: ಈ ಸಾಲಿನ ಮೀನುಗಾರಿಕಾ ಋತು ಈಗಾಗಲೇ ಪ್ರಾರಂಭವಾಗಿದ್ದು, ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆಗಳನ್ನು ಸುಗಮವಾಗಿ ನಡೆಯುವಂತೆ ಎಲ್ಲ ಇಲಾಖೆಗಳು ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಂದರು ಇಲಾಖೆಯ ಮೂಲಕ ಪೊಲೀಸ್ ಇಲಾಖೆಯ ಅಭಿಪ್ರಾಯ ಪಡೆದು ಆಧುನಿಕ ತಂತ್ರಜ್ಞಾನದ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಬಂದರಿನ ನಿರ್ವಹಣೆ ನಡೆಸುತ್ತಿರುವ ಕೆ.ಎಫ್.ಡಿ.ಸಿ. ಸ್ವಚ್ಚತೆ ಹಾಗೂ ಭದ್ರತೆಯ ಬಗ್ಗೆ ವಿಶೇಷ ಮುತುವರ್ಜಿ ವಹಿಸಬೇಕು ಎಂದರು.
ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ನಾರಾಯಣ ಕರ್ಕೇರ, ನಿಕಟಪೂರ್ವ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಕಾರ್ಯದರ್ಶಿ ಜಗನ್ನಾಥ ಕಡೆಕಾರು, ಮೀನುಗಾರ ಮುಖಂಡರಾದ ರಾಮಚಂದ್ರ ಕುಂದರ್, ಸಾಧು ಸಾಲ್ಯಾನ್, ರಮೇಶ್ ಕೋಟ್ಯಾನ್, ಕಿಶೋರ್ ಡಿ. ಸುವರ್ಣ, ಮಧುಕರ್, ಕರುಣಾಕರ ಸಾಲ್ಯಾನ್, ದಯಾಕರ ಸುವರ್ಣ, ಸುರೇಶ್ ಬಿ. ಕುಂದರ್, ಪ್ರಕಾಶ್ ಬಂಗೇರ, ಗೀತಾ ಕರ್ಕೇರ, ಗೋಪಾಲ ಆರ್. ಕೆ., ನಾಗರಾಜ ಕುಂದರ್ ಹಾಗೂ ಮೀನುಗಾರಿಕೆ, ಬಂದರು, ಕರಾವಳಿ ಕಾವಲು ಪೊಲೀಸ್, ಪೊಲೀಸ್ ಇಲಾಖೆ, ಅಗ್ನಿಶಾಮಕದಳ ಇಲಾಖೆಗಳ ಅಧಿಕಾರಿಗಳು, ವಿವಿಧ ಮೀನುಗಾರಿಕಾ ಸಹಕಾರಿ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.