ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುರುತಿಸಲಾಗಿರುವ 62 ಅಪಘಾತ ಸ್ಥಳಗಳಲ್ಲಿ ರಸ್ತೆಯ ಪ್ರಾರಂಭ ಮತ್ತು ಅಂತ್ಯದಲ್ಲಿ ಎಚ್ಚರಿಕೆ ಸೂಚನಾ ಫಲಕ, ಸ್ಪೀಡ್ ಬ್ರೇಕರ್, ಮಾರ್ಗ ಸೂಚಕಗಳನ್ನು ಅಳವಡಿಸಿ ಅಪಘಾತ ಪ್ರಮಾಣ ತಗ್ಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಪಘಾತಗಳು ಸಂಭವಿಸಿದ ತಕ್ಷಣ ದೂರದ ಆಸ್ಪತ್ರೆಗಳಿಗೆ ಹೋಗದೇ ಜಿಲ್ಲಾ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ಬೇರೆಡೆಗೆ ತೆರಳಬೇಕು. ಅಪಘಾತಕ್ಕೀಡಾದವರನ್ನು ತಕ್ಷಣ ಅಸ್ಪತ್ರೆಗೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಯಾವುದೇ ಕಾರಣಕ್ಕೂ ಟೆಂಪೋದಂತಹ ಗೂಡ್ಸ್ ವಾಹನಗಳಲ್ಲಿ ಜನರನ್ನು ಸಾಗಿಸಬಾರದು. ಒಂದು ವೇಳೆ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ವಾಹನ ಮಾಲೀಕ ಮತ್ತು ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಮಾತನಾಡಿ,ಜಿಲ್ಲೆಯಲ್ಲಿ ಅತಿಯಾದ ವೇಗ, ಚಾಲಕರ ನಿರ್ಲಕ್ಷ್ಯ, ಕುಡಿದು ವಾಹನ ಚಾಲನೆ ಮಾಡುತ್ತಿರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಜಿಲ್ಲೆಯಲ್ಲಿ ಒಟ್ಟು 260 ವಾಹನಗಳ ಪರವಾನಗಿಯನ್ನು ರದ್ದುಪಡಿಸಲಾಗಿದ್ದು, ಅದರಲ್ಲಿ 82 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗಿವೆ. ಡ್ರಂಕ್ ಅಂಡ್ ಡ್ರೈವ್ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕುಡಿದು ವಾಹನ ಚಾಲನೆ ಮಾಡುವ ಚಾಲಕರ ವಾಹನ ಪರವಾನಗಿಯನ್ನು ರದ್ದು ಮಾಡುವಂತೆ ಆರ್.ಟಿ.ಒ ಅಧಿಕಾರಿಗೆ ಸೂಚಿಸಿದರು.