ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಮನವಿಪತ್ರ ಸಲ್ಲಿಸಿ ಮಾತನಾಡಿದ ಅವರು, ತಾಲೂಕಿನ ಗ್ರಾಮೀಣ ಭಾಗದ ಜನತೆಯ ಆರೋಗ್ಯಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಉಪಕ್ರಮಗಳನ್ನು ಹೆಚ್ಚಿಸಬೇಕು, ಹಲವೆಡೆ ಹಳ್ಳಿಗಳಲ್ಲಿ ವೈದ್ಯರ ಕೊರತೆಯಿಂದ ಮುಚ್ಚಿರುವ ಪ್ರಾಥಮಿಕ ಆರೋಗ್ಯ, ಉಪ ಆರೋಗ್ಯ ಕೇಂದ್ರಗಳನ್ನು ಕೂಡಲೇ ಪುನಃ ಆರಂಭಿಸಿ, ಅಗತ್ಯ ವೈದ್ಯಾಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಿ ಆರೋಗ್ಯ ಸೇವೆಗಳನ್ನು ಒದಗಿಸಲು ಅಗತ್ಯಗತ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.ತಹಸೀಲ್ದಾರ್ ಪ್ರಕಾಶ ಸಿಂದಗಿ ಮನವಿ ಸ್ವೀಕರಿಸಿ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಲ್ಲಮ್ಮ ಕೂಂಡಗುಳ, ಶರಣಮ್ಮ, ರಮೇಶ್ ಚಲುವಾದಿ, ಆಕಾಶ ಬಿರಾದಾರ, ಪ್ರಜ್ವಲ್ ಮಲ್ಲಾರಿ, ಶಿವಾನಂದ ಖಾಚಾಪುರ ಇತರ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.