ಗ್ಯಾರಂಟಿಯಿಂದ ಅರ್ಹರು ವಂಚಿತ ಆಗದಂತೆ ಅಗತ್ಯ ಕ್ರಮವಹಿಸಿ

KannadaprabhaNewsNetwork |  
Published : Aug 01, 2025, 12:30 AM IST
31ಕೆಪಿಎಲ್30 ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ | Kannada Prabha

ಸಾರಾಂಶ

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ. ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಯೋಜನೆ ಲಾಭ ದೊರಕಿಸಿಕೊಡಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು.

ಕೊಪ್ಪಳ:

ಯಾವುದೇ ಅರ್ಹ ಫಲಾನುಭವಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದೆ. ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಯೋಜನೆ ಲಾಭ ದೊರಕಿಸಿಕೊಡಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕವೆ ಸಾರ್ವಜನಿಕರಿಗೆ ಅರಿವು ಮೂಡಿಸಿ. ಪಡಿತರ ವಿತರಿಸುವ ಸಮಯವನ್ನು ಸರ್ಕಾರವು ಹೆಚ್ಚಿಸಿದೆ. ಅದರಂತೆ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸುವಂತೆ ಸೂಚಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು. ಆಹಾರ ಸಾಮಗ್ರಿಗಳ ವಿತರಣೆಗೂ ಮುನ್ನ ಅದರ ಗುಣಮಟ್ಟ ಪರಿಶೀಲಿಸಬೇಕು. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿ ಪರಿಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಬಿಲ್ ಬಾಕಿ ವಸೂಲಾತಿ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಂಬಂಧಿಸಿದ ಅಧಿಖಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಕುಡಿಯುವ ನೀರಿನ ಯೋಜನೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳ ವಿದ್ಯುತ್ ಬಿಲ್ ಬಾಕಿಯಿದ್ದಲ್ಲಿ, ಅವುಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಬಾರದು. ಲೈನ್‌ಮೆನ್‌ಗಳು ಹಾಗೂ ಸೆಕ್ಷನ್ ಅಧಿಕಾರಿಗಳು ಜನರೊಂದಿಗೆ ನಮ್ರತೆಯಿಂದ ನಡೆದುಕೊಳ್ಳಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಬಿ. ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ. ಮತ್ತು ನಾಗರಾಜ ಅರಳಿ ಸಲಹೆ ನೀಡಿದರು. ಜಿಲ್ಲಾ ಸಮಿತಿ ಸದಸ್ಯರಾದ ಶಾರದಾ ಕಟ್ಟಿಮನಿ, ಸೋಮನಾಥ, ಮಲ್ಲಪ್ಪ ಜಕ್ಕಲಿ, ಸುಧೀರ ಶಾಮಾಚಾರ, ಸಂಗಮೇಶ ಗುತ್ತಿ, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ