ಕನ್ನಡಪ್ರಭ ವಾರ್ತೆ ಮಧುಗಿರಿ
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಬೇಸಿಗೆ ಪ್ರಾರಂಭವಾಗಿದ್ದು, ನಗರ, ಗ್ರಾಮೀಣ ಜನ-ಜಾನುವಾರುಗಳಿಗೆ ಕುಡಿವ ನೀರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದರು.
ಕೆರೆಗಳಲ್ಲಿ ಅನಧಿಕೃತವಾಗಿ ಮಣ್ಣನ್ನು ಸಾಗಿಸದೇ, ರೈತರು ತಮ್ಮ ಜಮೀನುಗಳಿಗೆ ಸಾಗಿಸಲು ಅರ್ಜಿ ಪಡೆದು ಅನುಮತಿ ನೀಡಬೇಕು. ಆದರೆ ವಾಣಿಜ್ಯ ಉಪಯೋಗಕ್ಕೆ ಸಾಗಿಸಲು ಬೆಲೆ ನಿಗದಿಪಡಿಸಿ ಅನುಮತಿ ನೀಡಬೇಕು. ಗ್ರಾಪಂಗಳ ವ್ಯಾಪ್ತಿಯಲ್ಲಿ ಅಂಗನವಾಡಿ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಶೂ,ಯೂನಿಫಾರಂ, ವಿತರಿಸಲು ಕ್ರಮ ಕೈಗೊಳ್ಳಿ, ಅಲ್ಲದೆ ಸರ್ಕಾರಿ ಶಾಲಾ ಮಕ್ಕಳಿಗೆ ಗುಣ ಮಟ್ಟದ ಪಠ್ಯಪುಸ್ತಕ ನೀಡಲು ಅಗತ್ಯ ಕ್ರಮ ಕೈಗೊಳ್ಳ ಬೇಕೆಂದು ಪಿಡಿಓಗಳಿಗೆ ಸೂಚಿಸಿದರು.ಸಾರ್ವಜನಿಕರಿಂದ ಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಂಡು ಕೆಲಸ ಮಾಡಿ ಗ್ರಾಮಗಳ ಮತ್ತು ಜನರ ಆರ್ಥಿಕ ಮಟ್ಟ ಸುಧಾರಣೆಗೆ ಗ್ರಾಪಂನಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಪಿಡಿಒಗಳು ಮುಂದಾಗಬೇಕು.ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ದದೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಎಸಿ ಗೋಟೂರು ಶಿವಪ್ಪ, ತಹಸೀಲ್ದಾರ್ ಶ್ರೀನಿವಾಸ್,ಇಒ ಲಕ್ಷ್ಮಣ್,ಡಿವೈಎಸ್‌ಪಿ ಮಂಜುನಾಥ್,ಎಡಿ ಧನಂಜಯ್,ಪುರಸಭೆ ಮುಖ್ಯಾಧಿಕಾರಿ ಸುರೇಶ್,ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಇತರೆ ಇಲಾಖಾಧಿಕಾರಿಗಳು ಇದ್ದರು.