ಜಂಜಾಟ ಮರೆಯಲು ಆಟಗಳಲ್ಲಿ ಪಾಲ್ಗೊಳ್ಳಿ: ಶಾಸಕ ತುನ್ನೂರು

KannadaprabhaNewsNetwork |  
Published : Jan 17, 2024, 01:49 AM IST
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಾಸಕ ಚೆನ್ನಾರಡ್ಡಿ ಪಾಟೀಲ್ ಕ್ರೀಡಾಜ್ಯೋತಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು. | Kannada Prabha

ಸಾರಾಂಶ

ಸಮಾಜದ ಅಂಕುಡೊಂಕು ತಿದ್ದುವ ಪತ್ರಕರ್ತರಿಗೂ ವೈಯಕ್ತಿಕ ಜೀವನ ಇರುತ್ತದೆ. ಮಾಧ್ಯಮ ಕ್ಷೇತ್ರಕ್ಕೆ ಸಮಾಜದಲ್ಲಿ ತನ್ನದೇಯಾದ ಘನತೆ ಗೌರವವಿದೆ. ಇಂಥ ರಂಗದಲ್ಲಿ ಕೆಲಸ ಮಾಡುವ ಪತ್ರಕರ್ತರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ಶಾಸಕರು ಹೇಳಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಸದಾ ಒತ್ತಡದಲ್ಲಿರುವ ಪತ್ರಕರ್ತರು ವರ್ಷಕ್ಕೊಮ್ಮೆಯಾದರೂ ಇಡೀ ಒಂದು ದಿನ ಬೆರತು ಆಟೋಟಗಳಲ್ಲಿ ಪಾಲ್ಗೊಂಡು ಜೀವನದ ಜಂಜಾಟ ಮರೆಯಲು ಪ್ರಯತ್ನಿಸಬೇಕು ಎಂದು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ತಿಳಿಸಿದರು.

ಮಂಗಳವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಸಿದ್ದ ವಾರ್ಷಿಕ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂವಿಧಾನದ ನಾಲ್ಕನೇ ಅಂಗ ಎಂದು ಮಾಧ್ಯಮವನ್ನು ಪರಿಗಣಿಸಿದೆ. ಸಮಾಜದ ಅಂಕುಡೊಂಕು ತಿದ್ದುವ ಪತ್ರಕರ್ತರಿಗೂ ವೈಯಕ್ತಿಕ ಜೀವನ ಇರುತ್ತದೆ ಎಂದರು.

ಮಾಧ್ಯಮ ಕ್ಷೇತ್ರಕ್ಕೆ ಸಮಾಜದಲ್ಲಿ ತನ್ನದೇಯಾದ ಘನತೆ ಗೌರವವಿದೆ. ಇಂಥ ರಂಗದಲ್ಲಿ ಕೆಲಸ ಮಾಡುವ ನೀವುಗಳು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬೇಕು. ಹೀಗಾಗಿ ಕ್ರೀಡಾಕೂಟದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದರು.

ಸಂಘದ ಅದ್ಯಕ್ಷ ಮಲ್ಲಪ್ಪ ಸಂಕೀನ್ ಮಾತನಾಡಿದರು. ಸಂಘದ ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ ಕಾಮನಟಗಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತ್ ಕುಲಕರ್ಣಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಇದ್ದರು. ಪತ್ರಕರ್ತರಾದ ಮಹೇಶ ಪತ್ತಾರ ಪ್ರಾರ್ಥಿಸಿದರು. ನರಸಪ್ಪ ನಾರಾಯಣೋರ ನಿರೂಪಿಸಿದರು. ವೆಂಕಟಗಿರಿ ದೇಶಪಂಡೆ ಸ್ವಾಗತಿಸಿದರು.

ಕ್ರಿಕೆಟ್, ಹಗ್ಗಜಗ್ಗಾಟ, ಕೇರಂ, ಚೆಸ್, ಮಹಿಳೆಯರಿಗಾಗಿ ಕುರ್ಚಿಯಾಟ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಂಜೆ ನಡೆದ ರಸಮಂಜರಿ ಕಾರ್ಯಕ್ರಮ ಗಮನ ಸೆಳೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌