ಪ್ರಜಾಪ್ರಭುತ್ವ ಹಬ್ಬದಲ್ಲಿ ಹೆಮ್ಮೆಯಿಂದ ಭಾಗವಹಿಸಿ

KannadaprabhaNewsNetwork |  
Published : Apr 03, 2024, 01:36 AM IST
2GDG6 | Kannada Prabha

ಸಾರಾಂಶ

ಮೇ. 7ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಪ್ರತಿಶತ ನೂರಕ್ಕೆ ನೂರರಷ್ಟು ಮತದಾನ ಮಾಡಿ

ಗದಗ: ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ.ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಜಿಪಂ ಉಪಕಾರ್ಯದರ್ಶಿ ಸಿ.ಬಿ.ದೇವರಮನಿ ಹೇಳಿದರು.

ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕಂದಕ ಬದು ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಗದಗ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಶೇಷ ಮತದಾನ ಜಾಗೃತಿ ಹಾಗೂ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಲೋಕಸಭೆ ಚುನಾವಣೆ 2024 ಅಂಗವಾಗಿ ಮತದಾರ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಿರುವುದು ಅತ್ಯಂತ ಖುಷಿಯ ವಿಚಾರವಾಗಿದೆ, ದೇಶ ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯವಾಗಿರುತ್ತದೆ ಯಾರೊಬ್ಬರೂ ಮತದಾನ ಮಾಡಲು ನಿಷ್ಕಾಳಜಿ ತೋರಬಾರದು ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾಗಿದೆ, ಯಾರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಖುಷಿಯಿಂದ ಮತ ಚಲಾಯಿಸಬೇಕೆಂದು ಹೇಳಿದರು.

ಮತಗಟ್ಟೆ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಸ್ವವಿಸ್ತಾರವಾಗಿ ಹೇಳುವುದರ ಜತೆಗೆ 18 ವರ್ಷ ಮೇಲ್ಪಟ್ಟ ಯುವಕರು, ವೃದ್ಧರು, ವಿಕಲಚೇತನ ಮತದಾರರು ನಿರ್ಭೀತಿಯಿಂದ ಮೇ. 7ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಪ್ರತಿಶತ ನೂರಕ್ಕೆ ನೂರರಷ್ಟು ಮತದಾನ ಮಾಡಿ ಯೋಗ್ಯ ಹಾಗೂ ಸಮರ್ಥ ನಾಯಕರನ್ನು ಆಯ್ಕೆ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

ತಾಪಂ ಸಹಾಯಕ ನಿರ್ದೇಶಕ ಕುಮಾರ ಪೂಜಾರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತಕ್ಕೂ ಒಂದೇ ಮೌಲ್ಯ ಇರುತ್ತದೆ.ಯಾರೂ ಕೂಡ ಅಸಡ್ಡೆತನ ತೊರ ಕೂಡದು. ನಮ್ಮ ಹಕ್ಕನ್ನು ನಾವು ಕಡ್ಡಾಯವಾಗಿ ಚಲಾಯಿಸಬೇಕು ಎಂದು ತಿಳಿಸಿದರು.

ಗಮನಸೆಳೆದ ಅಕ್ಷರ ಮಾಲೆ: ಕಾಮಗಾರಿ ಸ್ಥಳದಲ್ಲಿ ಹಾಜರಿದ್ದ ಕೂಲಿಕಾರರ ಸಹಾಯದಿಂದ ಮೇ 7 ಎಂದು ಚಿತ್ರ ಬಿಡಿಸಲಾಯಿತು.ನಂತರ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಪಂ ನರೇಗಾ ಸಿಬ್ಬಂದಿ ಎಡಿಪಿಸಿ ಕಿರಣ್ ಕುಮಾರ, ಮಲ್ಲಿಕಾರ್ಜುನ ಸರ್ವಿ.ವಿ.ಬಿ ಸಜ್ಜನ ಹಾಗೂ ತಾಲೂಕು ನರೇಗಾ ಸಿಬ್ಬಂದಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ