ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ

KannadaprabhaNewsNetwork |  
Published : Mar 23, 2026, 02:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಸೂಚಿಸಿದರು.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರು ಹಾಗೂ ಕಂದಾಯ ವಿಷಯಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು.ಬೇಸಿಗೆ ಕಾಲದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿನ ನೀರಿನ ಘಟಕಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಬೇಕು. ಒಂದು ವೇಳೆ ಖಾಸಗಿ ಬೋರ್‌ವೆಲ್‌ಗಳು ದೊರೆಯದಿದ್ದ ಪಕ್ಷದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಕ್ರಮ ವಹಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಿದರು.ಮಳೆಗಾಲದ ಸಂದರ್ಭದಲ್ಲಿ ಭೂಕುಸಿತ ಉಂಟಾದ ಸಂದರ್ಭದಲ್ಲಿ ಯಾವುದೇ ಅನಾಹುತಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇದಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಪೋಡಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಕು. ಭೂ ಸುರಕ್ಷಾ ಯೋಜನೆಯಡಿ ಭೂ ದಾಖಲೆಗಳ ಡಿಜಿಟಲೀಕರಣವನ್ನು ಪೂರ್ಣಗೊಳಿಸಬೇಕು ಎಂದರು.ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮಗಳಿಗೆ ಸಂಬಂಧಿಸಿದಂತೆ ಮೊದಲ ಹಾಗೂ ಎರಡನೆಯ ಹಂತದಲ್ಲಿ 117 ಗ್ರಾಮಗಳನ್ನು, ಮೂರನೆಯ ಹಂತದಲ್ಲಿ 257 ಗ್ರಾಮಗಳು ಸೇರಿದಂತೆ ಒಟ್ಟು 374ಗ್ರಾಮಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 213 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆಯಾಗಿದ್ದು, 89 ಪ್ರಕರಣಗಳು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, 38 ಅನ್ನು ಹಿಂದಿರುಗಿಸಿವೆ. 34ಪ್ರಾಥಮಿಕ ಅಧಿಸೂಚನೆಗೆ ಬಾಕಿ ಉಳಿದಿದ್ದು, 18 ಪ್ರಕರಣಗಳು 2ಇ ಅಧಿಸೂಚನೆ ಹೊರಡಿಸಿರುವ ಪ್ರಕರಣಗಳಾಗಿವೆ. ತಹಸೀಲ್ದಾರರಿಂದ ಪ್ರಸ್ತಾವನೆ ಸಲ್ಲಿಸಲು 8 ಪ್ರಕರಣಗಳು ಬಾಕಿ ಉಳಿದಿದ್ದು, 7 ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. 203 ಪ್ರಕರಣಗಳು ಅಂತಿಮ ಅಧಿಸೂಚನೆಯಾಗಿದ್ದು, 2 ಅಂತಿಮ ಅಧಿಸೂಚನೆಗೆ ಸಲ್ಲಿಸಿರುವ ಪ್ರಕರಣಗಳಾಗಿದ್ದು, ಇವುಗಳಲ್ಲಿ ಒಂದನ್ನು ಹಿಂದಿರುಗಿಸಲಾಗಿದೆ. 7ಅಂತಿಮ ಅಧಿಸೂಚನೆಗೆ ಸಲ್ಲಿಸಲು ಬಾಕಿ ಉಳಿದಿವೆ ಎಂದರು.ಸಭೆಯಲ್ಲಿ ಉಪವಿಭಾಗಾಧಿಕಾರಿಗಳು, ಎಲ್ಲಾ ತಾಲೂಕುಗಳ ತಹಸೀಲ್ದಾರರು, ಭೂ ದಾಖಲೆಗಳ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು ಇದ್ದರು.ಫೋಟೊ---

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರು ಹಾಗೂ ಕಂದಾಯ ವಿಷಯಗಳ ಕುರಿತು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್‌ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಎಂ.ಎನ್‌. ನಾಗರಾಜ್‌ ಸೇರಿದಂತೆ ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಗಳೂರಿಗೆ ಬಂತು ಎಲ್‌ಪಿಜಿ ಹಡಗು
ನತ್ತಬೆಲೆ ಡೇರಿ ಅಧ್ಯಕ್ಷರಾಗಿ ಶಾಸಕ ನಾರಾಯಣಸ್ವಾಮಿ ಅವಿರೋಧ ಆಯ್ಕೆ