ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ-ಶಾಸಕ ಬಣಕಾರ

KannadaprabhaNewsNetwork |  
Published : Mar 06, 2026, 02:30 AM IST
ಹಿರೇಕೆರೂರು ಪಟ್ಟಣದ ತಾಪಂ ಸಭಾಭವನದಲ್ಲಿ ಶಾಸಕ ಯು.ಬಿ. ಬಣಕಾರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. | Kannada Prabha

ಸಾರಾಂಶ

ಯಾವುದೇ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆ ಸಾಧಿಸಿ, ಕೆಲಸ ಮಾಡುವ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.

ಹಿರೇಕೆರೂರು: ಯಾವುದೇ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಸಮನ್ವಯತೆ ಸಾಧಿಸಿ, ಕೆಲಸ ಮಾಡುವ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ, ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಅಧಿಕಾರಿಗಳು ಸಮನ್ವಯತೆ ಸಾಧಿಸಿ ಕೆಲಸ ಮಾಡುವ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬೇಸಿಗೆ ಆರಂಭವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ತಹಸೀಲ್ದಾರರು, ಇಒ ಹಾಗೂ ಗ್ರಾಮೀಣ ಕುಡಿಯುವ ನೀರಿನ ಇಲಾಖೆಯ ಅಧಿಕಾರಿಗಳು, ಪಿಡಿಒ ಸಭೆ ನಡೆಸಿ ಸಮಸ್ಯೆ ಇರುವ ಗ್ರಾಮಗಳನ್ನು ಪಟ್ಟಿ ಮಾಡಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಲುವಾಗಿ ಸಾರ್ವಜನಿಕರು ಪ್ರತಿಭಟನೆ ನಡೆಸುವ ಪರಿಸ್ಥಿತಿ ಬರಬಾರದು ಎಂದು ಸೂಚನೆ ನೀಡಿದರು.

ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಬಡ ರೋಗಿಗಳಿಗೆ ಹೆಚ್ಚಿನ ದರದ ಔಷಧೋಪಚಾರ ಅವಶ್ಯಕತೆ ಬಂದಲ್ಲಿ ಎಬಿಆರ್‌ಕೆ ಮೂಲಕ ಹಣ ಪಾವತಿ ಮಾಡಿ ಅಂಥವರಿಗೆ ಔಷಧ ಒದಗಿಸುವ ಕಾರ್ಯ ಮಾಡಬೇಕು. ಪ್ರಗತಿ ಪತ್ರಿಕೆಯಲ್ಲಿ ಎಬಿಆರ್‌ಕೆ ಹಣಕಾಸು ವ್ಯವಹರಿಸಿದ ಹಾಗೂ ಎಲ್ಲ ಆಸ್ಪತ್ರೆಗಳಲ್ಲಿನ ಔಷಧಗಳ ದಸ್ತಾನುಗಳ ಮಾಹಿತಿ ನೀಡಬೇಕು ಎಂದು ಟಿಎಚ್‌ಒ ಅವರಿಗೆ ಸೂಚನೆ ನೀಡಿದರು.

ತಹಸೀಲ್ದಾರರು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆ ನಡೆಸುವ ಮೂಲಕ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ತಂತ್ರಾಂಶದಲ್ಲಿ ಅಳವಡಿಸುವ ಕುರಿತು ಜಾಗೃತಿ ಮೂಡಿಸಬೇಕು. ನೂತನವಾಗಿ ಪ್ರಾರಂಭವಾಗುವ ಕೆಪಿಎಸ್ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಅಂದಾಜು ಪತ್ರಿಕೆ ತಯಾರಿಸುವಾಗ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ಖುದ್ದು ಹಾಜರಿದ್ದು, ಬೇಕಾಗುವ ಸೌಲಭ್ಯಗಳ ಮಾಹಿತಿ ನೀಡಬೇಕು ಎಂದು ಬಿಇಒ ಅವರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಎಂ. ರೇಣುಕಾ, ಕಾರ್ಯನಿರ್ವಾಹಕ ಅಧಿಕಾರಿಗ ರವಿ ಎನ್., ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬುರಡೀಕಟ್ಟಿ ಹಾಜರಿದ್ದರು.ಹಿರೇಕೆರೂರಿನ ಸಾರ್ವಜನಿಕ ಆಸ್ಪತ್ರೆಯ ನವೀಕರಣಕ್ಕೆ ₹3 ಕೋಟಿ ಬಿಡುಗಡೆಯಾಗಿ ಟೆಂಡರ್ ಪ್ರಕ್ರಿಯೆ ಆಗಿದೆ. ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು. ಕೋಡ ಮತ್ತು ಹಂಸಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೂತನ ಕಟ್ಟಡ ನಿರ್ಮಾಣಕ್ಕೆ ತಲಾ ₹ 3.20 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಗುತ್ತಿಗೆದಾರರನ್ನು ನಿಗದಿ ಮಾಡಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮರಕ್ಕೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಸಾವು
ದುಬೈನಲ್ಲಿ ಸಿಲುಕಿದ್ದ ಬಳ್ಳಾರಿಗರು ಸುರಕ್ಷಿತವಾಗಿ ವಾಪಸ್