ರಾಮನಗರ: ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಸಂಸದ ಡಾ. ಸಿ.ಎನ್.ಮಂಜುನಾಥ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯ 27 ಗ್ರಾಮ ಪಂಚಾಯಿತಿಗಳ 43 ಗ್ರಾಮಗಳಲ್ಲಿ ನೀರಿನ ಸಮಸ್ಯೆಯಿದ್ದು, ಖಾಸಗಿ ಕೊಳವೆ ಬಾವಿಗಳು ಹಾಗೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಟಾಸ್ಕ್ ಫೋರ್ಸ್ ಒಂದು ಮತ್ತು ಎರಡರಲ್ಲಿ 251 ಕುಡಿಯುವ ನೀರು ಕಾಮಗಾರಿಗಳನ್ನು ಹಾಗೂ ಸಂಸದರ ಅನುದಾನದಡಿ (ಎಂಪಿ ಲ್ಯಾಡ್) ಜಿಲ್ಲೆಯಲ್ಲಿ 20 ಕುಡಿಯುವ ನೀರು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜ್ಞಾನಪ್ರಕಾಶ್ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕುಡಿಯುವ ನೀರು ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಜಲಜೀವನ್ ಮಿಷನ್ ಯೋಜನೆ ಸಂಪೂರ್ಣವಾಗಿ ಅನುಷ್ಠಾನಗೊಂಡಿಲ್ಲ. ಜಿಲ್ಲೆಯ ಹಲವು ಕಡೆ ಬೋರ್ವೆಲ್ಗಳನ್ನು ಕೊರೆದಿದ್ದರೂ ಅದಕ್ಕೆ ಪಂಪು ಮೋಟಾರು ಅಳವಡಿಸದೇ ಹೊಸ ಬೋರ್ವೆಲ್ ಕೊರೆಯಲಾಗುತ್ತಿದೆ. ಹೊಸದಾಗಿ ನಿರ್ಮಿಸಲಾಗಿರುವ ಓವರ್ ಹೆಡ್ ಟ್ಯಾಂಕ್ಗಳಿಗೆ ನೀರು ತುಂಬಿಸದೆ ಖಾಲಿ ಬಿಡಲಾಗಿದೆ. ಕೆಲವೊಂದು ಕಡೆಯ ಕಾಮಗಾರಿಗಳಲ್ಲಿ ಅನಗತ್ಯ ನೀರು ಪೂರೈಸಲಾಗುತ್ತಿದೆ ಎಂದು ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯರು ಸಭೆಯ ಗಮನಕ್ಕೆ ತಂದರು.ಈಗಾಗಲೇ ಕೊರೆದಿರುವ 52 ಬೋರ್ವೆಲ್ಗಳಿಗೆ ಪಂಪು ಮೋಟಾರು ಅಳವಡಿಸಲು ಅಗತ್ಯವಿರುವ ಅನುದಾನಕ್ಕೆ ಕ್ರಮ ವಹಿಸಬೇಕು. ಅಂತರ್ಜಲ ಹೆಚ್ಚಿಸಲು ಬೋರ್ವೆಲ್ಗಳ ಪುನರುಜ್ಜೀವನಕ್ಕೆ ಕ್ರಮ ವಹಿಸಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳನ್ನು ಪೂರ್ಣಗೊಳಿಸದ ಹಾಗೂ ಕಳಪೆ ಕಾಮಗಾರಿಗಳನ್ನು ಕೈಗೊಂಡ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು. ಸರ್ಕಾರದ ಹಣವನ್ನು ದುಂದು ವೆಚ್ಚ ಮಾಡದೆ ಯೋಜನಾ ಬದ್ಧವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಿಯಾ ಯೋಜನೆ ಸಿದ್ದಪಡಿಸಿ ಕಾಮಗಾರಿ ಆರಂಭಿಸಬೇಕು ಎಂದು ಸಂಸದರು ಅಧಿಕಾರಿಗಳಿಗೆ ಸೂಚಿಸಿದರು.
ಕಾಡಂಚಿನಲ್ಲಿ ತಡೆಗೋಡೆ ನಿರ್ಮಿಸಿ :
ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವೋಲ್ವೋ ಎಸಿ ಬಸ್ಗಳಲ್ಲಿ ಪ್ರತಿ ಪ್ರಯಾಣಿಕರಿಗೂ ಟೋಲ್ ದರ ವಸೂಲಿ ಮಾಡುತ್ತಿರುವ ಕುರಿತು ಸಂಬಂಧಿಸಿದ ಇಲಾಖೆ ಮಂತ್ರಿಗಳ ಬಗ್ಗೆ ಚರ್ಚಿಸಿ ಟೋಲ್ ದರ ವಸೂಲಿ ಮಾಡದಂತೆ ತಿಳಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ , ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಅನ್ಮೋಲ್ ಜೈನ್ , ದಿಶಾ ಸಮಿತಿಯ ನಾಮನಿರ್ದೇಶಿನ ಸದಸ್ಯರದ ಶೋಭಾ, ರೇಖಾ, ರಾಜೇಶ್, ನರಸಿಂಹಮೂರ್ತಿ, ಸಿದ್ದರಾಮು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಶಿಥಿಲಗೊಂಡಿರುವ ಕೊಠಡಿಗಳನ್ನು ಗುರುತಿಸಿ, ಪಟ್ಟಿ ನೀಡುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಭಾಗ್ಯಲಕ್ಷ್ಮಿ ಅವರಿಗೆ ಸೂಚಿಸಿದ ಸಂಸದ ಮಂಜುನಾಥ್ ರವರು, ಶಿಥಿಲಗೊಂಡಿರುವ ಕೊಠಡಿಗಳನ್ನು ಜಿಲ್ಲಾ ಪಂಚಾಯತ್ ಅನುದಾನ ಅಥವಾ ಸಿಎಸ್ಆರ್ ಅನುದಾನದಡಿ ದುರಸ್ಥಿ ಮಾಡುವುದಾಗಿ ತಿಳಿಸಿದರು.
ಕೋಟ್..............
- ಡಾ.ಸಿ.ಎನ್.ಮಂಜುನಾಥ್, ಸಂಸದರು, ಬೆಂಗಳೂರು ಗ್ರಾಮಾಂತರ ಕ್ಷೇತ್ರ.
----------------------25ಕೆಆರ್ ಎಂಎನ್ 5,6.ಜೆಪಿಜಿ
ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಯಿತು.----------------------