ಸಮಸ್ಯೆ ಉಂಟಾದ ಬಳಿಕ ಕ್ರಮ ಕೈಗೊಳ್ಳುವುದಲ್ಲ, ಸಮಸ್ಯೆ ಬಾರದಂತೆ ಮುಂಚಿತವಾಗಿಯೇ ಯೋಜನೆ ರೂಪಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಪ್ರತಿ ಗ್ರಾಮದಲ್ಲೂ ಕುಡಿಯುವ ನೀರಿನ ಮೂಲಗಳು, ಮೋಟಾರ್‌ಗಳು, ಪೈಪ್‌ಲೈನ್‌ಗಳು ಹಾಗೂ ನೀರಿನ ಟ್ಯಾಂಕ್‌ಗಳ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸಬೇಕು. ಎಲ್ಲಿ ದುರಸ್ತಿ ಅಗತ್ಯವಿದೆಯೋ ಅದನ್ನು ಕೂಡಲೇ ಕೈಗೊಳ್ಳಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಜನರು ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಎಚ್ಚರಿಕೆ ನೀಡಿದರು.ತಾಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರು ಗಮನ ಸೆಳೆದ ಹಿನ್ನೆಲೆಯಲ್ಲಿ ಶಾಸಕ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ನೀರು ಪೂರೈಕೆ ಕುರಿತು ಸಮರ್ಪಕ ಮಾಹಿತಿ ನೀಡಲು ವಿಫಲರಾದ ಗ್ರಾಮ ಪಂಚಾಯಿತಿ ಪಿಡಿಓ ವಾಸಿಮ್ ಅವರನ್ನು ತರಾಟೆಗೆ ತೆಗೆದುಕೊಂಡರು.ಬೇಸಿಗೆ ಇರಲಿ, ಮಳೆಗಾಲ ಇರಲಿ, ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಗ್ರಾಮ ಪಂಚಾಯಿತಿಯ ಮೊದಲ ಆದ್ಯತೆ. ಸಮಸ್ಯೆ ಉಂಟಾದ ಬಳಿಕ ಕ್ರಮ ಕೈಗೊಳ್ಳುವುದಲ್ಲ, ಸಮಸ್ಯೆ ಬಾರದಂತೆ ಮುಂಚಿತವಾಗಿಯೇ ಯೋಜನೆ ರೂಪಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಪ್ರತಿ ಗ್ರಾಮದಲ್ಲೂ ಕುಡಿಯುವ ನೀರಿನ ಮೂಲಗಳು, ಮೋಟಾರ್‌ಗಳು, ಪೈಪ್‌ಲೈನ್‌ಗಳು ಹಾಗೂ ನೀರಿನ ಟ್ಯಾಂಕ್‌ಗಳ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸಬೇಕು. ಎಲ್ಲಿ ದುರಸ್ತಿ ಅಗತ್ಯವಿದೆಯೋ ಅದನ್ನು ಕೂಡಲೇ ಕೈಗೊಳ್ಳಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.ಇದೇ ವೇಳೆ ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ ಕುಡಿಯುವ ನೀರಿನ ಪೈಪ್‌ಲೈನ್‌ಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸದಿರುವುದನ್ನು ಗಮನಿಸಿದ ಶಾಸಕ ಮಂಜು, ಸ್ಥಳದಲ್ಲಿದ್ದ ಸೆಸ್ಕಾಂ ಜೆಇಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ, ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮವಹಿಸುವಂತೆ ಸೂಚಿಸಿದರು. "ಸರ್ಕಾರ ಕುಡಿಯುವ ನೀರಿಗಾಗಿ ಅಗತ್ಯ ಅನುದಾನ ಹಾಗೂ ಸೌಲಭ್ಯಗಳನ್ನು ಒದಗಿಸುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರು ಸಂಕಷ್ಟ ಅನುಭವಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ಜನರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯ ಎಂದು ಶಾಸಕ ಸಿಮೆಂಟ್ ಮಂಜು ಖಡಕ್ ಎಚ್ಚರಿಕೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.