ವಕ್ಫ್ ತಿದ್ದುಪಡಿಯಾದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಿ

KannadaprabhaNewsNetwork | Published : Nov 28, 2024 12:31 AM

ಸಾರಾಂಶ

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತೆ ವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು. ತಾವು ಜಿಲ್ಲೆಯಾದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತೆ ವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು.

ಇದೇ ವೇಳೆ ಶ್ರೀರಾಮಸೇನೆ ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಮತ್ತು ಜಿಲ್ಲಾಧ್ಯಕ್ಷ ಹೇಮಂತ್ ಜಾನೆಕೆರೆ ಮಾಧ್ಯಮದೊಂದಿಗೆ ಮಾತನಾಡಿ, ಇಡೀ ದೇಶದಲ್ಲಿ ವಕ್ಫ್ ಬೋರ್ಡ್ ಕಾಯ್ದೆ ತಿದ್ದುಪಡಿಯ ಬಗ್ಗೆ ಪರ, ವಿರೋಧ ಚರ್ಚೆ ಕಾವೇರುತ್ತಿದೆ. ಕೆಲವು ಮೌಲ್ವಿಗಳು ತಿದ್ದುಪಡಿ ಆದರೆ ದೇಶದಲ್ಲಿ ರಕ್ತಪಾತ ಆಗುತ್ತದೆ ಎನ್ನುವ ಹೇಳಿಕೆ ಕೊಡುತ್ತಿದ್ದಾರೆ. ಇದು ಗಲಭೆಗೆ ಪ್ರಚೋದನೆ ನೀಡುವ ಮುನ್ಸೂಚನೆ. ಹಿಂದೆಯೂ ಸಿಎಎ ಮತ್ತು ಎನ್.ಆರ್‌.ಸಿ. ಕೃಷಿ ಮಸೂದೆ ಮಂಡನೆಯಾದಾಗ ಇಂತಹ ಪ್ರಚೋದನಕಾರಿ ಹೇಳಿಕೆಗಳೇ ಗಲಭೆಗೆ ಕಾರಣವಾಗಿದ್ದವು. ಈಗಲೂ ಅದೇ ವಾತಾವರಣ ಸೃಷ್ಟಿಸುವ ಸಂಶಯವಿದ್ದು, ತಾವು ಜಿಲ್ಲೆಯಾದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಮನವಿ ಸಲ್ಲಿಸಿದರು.

ಈ ಬಾರಿ ಯಾರಾದರೂ ಉದ್ಧಟತನ, ಕಾನೂನು ಕೈಗೆತ್ತಿಕೊಂಡು ಸಾರ್ವಜನಿಕ ಶಾಂತಿ ಭಂಗ, ದೇವಸ್ಥಾನ, ಮಠ ಮಂದಿರದ ಮೇಲೆ ದಾಳಿ ಮುಂತಾದ ಅಹಿತಕರ ಘಟನೆ ಜರುಗದಂತೆ ತಾವು ಜಿಲ್ಲೆಯಾದ್ಯಂತ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ, ಆಸ್ತಿಪಾಸ್ತಿಗೆ, ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಹೇಳಿದರು. ಇದೇ ವೇಳೆ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನೆಕೆರೆ ಹೇಮಂತ್, ಗೌರವಾಧ್ಯಕ್ಷ ಕುಮಾರ್ ಯಡಿಯೂರ್, ಕಾರ್ಯಾಧ್ಯಕ್ಷರು ಮಹೇಶ್ ಕುಮಾರ್, ದುರ್ಗಾಸೇನೆ ಮಹಿಳಾ ಅಧ್ಯಕ್ಷೆ ನಾಗವೇಣಿ, ತಾಲೂಕ ಅಧ್ಯಕ್ಷ ಉಮೇಶ್ ಸಕಲೇಶಪುರ, ಜಿಲ್ಲಾ ಉಪಾಧ್ಯಕ್ಷರು ಪುನೀತ್, ಕಾರ್ಯದರ್ಶಿ ಮನು ಜಗತ್, ತಾಲೂಕು ಅಧ್ಯಕ್ಷರು ಪ್ರದೀಪ್ ಹಾಸನ್, ಅರಕಲಗೂಡು ತಾಲೂಕು ಅಧ್ಯಕ್ಷ ಅಮಿತ್ ಅರಕಲಗೂಡು, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಪ್ರಕಾಶ್, ಅರಸೀಕೆರೆ ತಾಲೂಕು ಅಧ್ಯಕ್ಷ ವರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಮುಗುಳುರ್, ಜಿಲ್ಲಾ ಉಪಾಧ್ಯಕ್ಷರು ಪುನೀತ್ ಇತರರು ಉಪಸ್ಥಿತರಿದ್ದರು.

Share this article