ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ನಗರದ ವಿಸ್ಡಮ್ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕಿನ ಅಗ್ನಿಶಾಮಕ ದಳದದಿಂದ ಅಗ್ನಿ ದುರಂತ ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾರ್ಗಸೂಚಿ ಪಾಲನೆ ಮಾಡಿಅಗ್ನಿ ಅವಘಡಗಳಿಂದ ರಾಷ್ಟ್ರದ ಸಂಪತ್ತು ನಷ್ಠ ಆಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರಿಂದ ಅಗ್ನಿ ಅನಾಹುತಗಳನ್ನು ತಪ್ಪಿಸಬಹುದು. ಇದರಿಂದ ಆಗುವ ಪ್ರಾಣ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ರಕ್ಷಿಸಬಹುದು ಎಂದರು.
ಎಲ್ಲಿಯೇ ಆಗಲಿ ಅಗ್ನಿ ದುರಂತಗಳು ಸಂಭವಿಸಿದಾಗ ಅಥವಾ ಯಾವುದೇ ತುರ್ತು ಸಂದರ್ಭದಲ್ಲಿ ನಾಗರೀಕರು ಸಂಕಷ್ಟದಲ್ಲಿ ಇದ್ದಾಗ ತಕ್ಷಣ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಅಗ್ನಿಶಾಮಕ ಠಾಣೆಗೆ ಮಾಹಿತಿ ಕೊಡಬಹುದೆಂದರು.ಬೆಂಕಿ ನಂದಿಸುವ ವಿಧಾನ ಮಾಹಿತಿ
ಈ ಸಂದರ್ಭದಲ್ಲಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿಯಿಂದ ಬೆಂಕಿ ನಂದಿಸುವ ವಿಧಾನಗಳ ಬಗ್ಗೆ ಮಾಹಿತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ಮುನಿ ಕೃಷ್ಣ ಎಂ, ರಕ್ಷಿತ್, ಹರೀಶ್ ಕೆವಿ, ಸಿದ್ದಪ್ಪ ಜರಳಿ, ಅಶೋಕ್ ಜಿ , ಹಾಗೂ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದರು.