ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿನ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಬಿ-ಜಿ ರಾಮ್‌ಜಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿದಿನ 50 ಸಾವಿರಕ್ಕೂ ಹೆಚ್ಚು ಜನರು ಕೂಲಿ ಕೆಲಸಕ್ಕೆ ಬೇಡಿಕೆ ಸಲ್ಲಿಸುತ್ತಿದ್ದು, ಆ ಪೈಕಿ 45 ಸಾವಿರದಿಂದ 50 ಸಾವಿರ ಜನರು ಮಾತ್ರ ಕೆಲಸ ಮಾಡುತ್ತಿದ್ದಾರೆ. ಕೆಲಸ ಕೋರುವ ಎಲ್ಲರಿಗೂ ಉದ್ಯೋಗ ಕಲ್ಪಿಸಲು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಇನ್ನು, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಸಾರ್ವಜನಿಕರಿಂದ ದೂರು ಬಂದರೆ ತಕ್ಷಣ ಸ್ಪಂದಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಹಾಗೂ ಕೊಳವೆಬಾವಿಗಳ ಮೂಲಕ ನೀರು ಪೂರೈಸಬೇಕು. ನೀರಿನ ಗುಣಮಟ್ಟ ಪರೀಕ್ಷೆಯನ್ನೂ ಕಡ್ಡಾಯವಾಗಿ ನಡೆಸಬೇಕ ಎಂದು ನಿರ್ದೇಶನ ನೀಡಿದರಲ್ಲದೇ, ಜಲಜೀವನ್ ಮಿಷನ್, ಇ-ಸ್ವತ್ತು, ಸ್ವಚ್ಛ ಭಾರತ ಸೇರಿದಂತೆ ವಿವಿಧ ಯೋಜನೆಗಳ ತಾಲೂಕುವಾರು ಪ್ರಗತಿ ಪರಿಶೀಲಿಸಿ, ಅನುಷ್ಠಾನಕ್ಕೆ ವೇಗ ನೀಡುವಂತೆ ತಿಳಿಸಿದರು.ಸಭೆಯಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ, ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ, ಮುಖ್ಯ ಯೋಜನಾಧಿಕಾರಿ ಮಹೇಶಕುಮಾರ ವಾಗೆ ಸೇರಿದಂತೆ ಜಿಪಂ ಹಾಗೂ ವಿವಿಧ ತಾಲೂಕು ಪಂಚಾಯತಿಯ ಅಧಿಕಾರಿಗಳು ಇದ್ದರು.