ಪರಿಸರ ಸಂರಕ್ಷಣೆ ಜವಾಬ್ದಾರಿ ನಿಭಾಯಿಸಿ: ಪಿಎಸ್‌ಐ ನಾಗರಾಜ್ ಕೊಟಗಿ

KannadaprabhaNewsNetwork |  
Published : Jul 08, 2026, 02:00 AM IST
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಸೋಮವಾರ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ೧೫೦ನೆಯ ಜಯಂತಿ ಅಂಗವಾಗಿ ಕೆಪಿಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರಿಸರ ಜಾಗೃತಿ ನಿಮಿತ್ತ ಸಸಿಗಳನ್ನು ನೆಟ್ಟರು. | Kannada Prabha

ಸಾರಾಂಶ

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ.

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೦ನೇ ಜಯಂತಿ ಅಂಗವಾಗಿ ಕೆಪಿಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪೊಲೀಸ್ ಠಾಣೆಯ ಆವರಣ ಸೇರಿದಂತೆ ಪೊಲೀಸ್ ವಸತಿ ಗೃಹಗಳ ಮೈದಾನ ಹಾಗೂ ಮತ್ತಿತರೆಡೆ ೨೦೦ಕ್ಕೂ ಹೆಚ್ಚು ಸಸಿಗಳನ್ನು ನಡೆಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪಿಎಸ್‌ಐ ನಾಗರಾಜ್ ಕೊಟಗಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಗಿಡಗಳನ್ನು ನೆಡುವುದಷ್ಟೇ ಸಾಕಾಗುವುದಿಲ್ಲ. ಅವುಗಳನ್ನು ಪೋಷಿಸಿ ಬೆಳೆಸುವ ಜವಾಬ್ದಾರಿಯನ್ನು ಎಲ್ಲರೂ ವಹಿಸಬೇಕು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಹಸಿರು ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಅದರ ಆರೈಕೆ ಮಾಡುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ಮಾತನಾಡಿ, ದೇಶದ ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ದೇಶಭಕ್ತಿ, ಶಿಸ್ತು ಮತ್ತು ರಾಷ್ಟ್ರೀಯ ಏಕತೆಯ ಪ್ರತೀಕವಾಗಿದ್ದರು. ಅವರ ಆದರ್ಶಗಳು ಇಂದಿನ ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ಜಯಂತಿಯ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರುತ್ತಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದರು.

ಕೆಪಿಜಿ ಪ್ರೌಢಶಾಲೆಯ ಪ್ರಶಾಂತ, ಗಡ್ಡಿ ಚನ್ನಬಸವ ಹಾಗೂ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಸಸಿ ನೆಡುವ ಕಾರ್ಯದಲ್ಲಿ ಪಾಲ್ಗೊಂಡರು. ಇದೇ ವೇಳೆ ನೆಟ್ಟ ಸಸಿಗಳ ಸಂರಕ್ಷಣೆ ಮಾಡುವ ಮೂಲಕ ಪರಿಸರ ಉಳಿಸುವ ಸಂಕಲ್ಪವನ್ನು ಎಲ್ಲರೂ ಕೈಗೊಂಡರು.

ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯ ಜಿ. ಗಿರೀಶ್, ವಿಎಸ್‌ಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಮಂಜುನಾಥ್ ಪಾಟೀಲ್, ಗ್ರಾಪಂ ಮಾಜಿ ಅಧ್ಯಕ್ಷ ಬಣಕಾರ್ ಕೊಟ್ರೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಪ್ರಸನ್ನ, ಕಿರಣ್, ಚೇತನ್, ಚೌಡಪ್ಪ, ಕೊಟ್ರೇಶ್ ಹಾಗೂ ಗಣೇಶ್ ಸಸಿ ನೆಡುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀರಂಗಪಟ್ಟಣ: ಕಾವೇರಿ ನದಿಗಿಳಿದು ರೈತ ಮುಖಂಡರಿಂದ ಪ್ರತಿಭಟನೆ
ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ