ಹೊಂ ಸ್ಟೇಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ: ಡಿಸಿ

KannadaprabhaNewsNetwork |  
Published : Apr 18, 2025, 12:34 AM IST
17ಕೆಎಂಎನ್ ಡಿ23 | Kannada Prabha

ಸಾರಾಂಶ

ಜಿಲ್ಲೆಯಲ್ಲಿನ ಹೊಂ ಸ್ಟೇಗಳು ಸರ್ಕಾರದ ನಿಯಮಗಳು ಪಾಲಿಸಬೇಕು. ಗುಣಮಟ್ಟದ ಆರೋಗ್ಯ, ನೈರ್ಮಲ್ಯ ಮತ್ತು ಅಗ್ನಿ ಸುರಕ್ಷತೆ ಒಳಗೊಂಡಂತೆ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುತ್ತಿರುವ ಬಗ್ಗೆ ಪರೀಕ್ಷಿಸಬೇಕು

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರವಾಸೋದ್ಯಮದ ವ್ಯಾಪ್ತಿಗೆ ಬರುವ ಹೊಂ ಸ್ಟೇಗಳಲ್ಲಿ ಸುರಕ್ಷತಾ ಮತ್ತು ರಕ್ಷಣೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿರುವ 4 ಹೊಸ ಹೊಂ ಸ್ಟೇಗಳಿಗೆ ಪರವಾನಿಗೆ ನೀಡುವ ಮೊದಲು ಹೊಂ ಸ್ಟೇ ಮಾಲೀಕರು ಗ್ರಾಪಂನಿಂದ ಪರವಾನಿಗೆ ಪಡೆದು ಹೊಂ ಸ್ಟೇ ನಡೆಸುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ ಎಂದರು.

ಜಿಲ್ಲೆಯಲ್ಲಿನ ಹೊಂ ಸ್ಟೇಗಳು ಸರ್ಕಾರದ ನಿಯಮಗಳು ಪಾಲಿಸಬೇಕು. ಗುಣಮಟ್ಟದ ಆರೋಗ್ಯ, ನೈರ್ಮಲ್ಯ ಮತ್ತು ಅಗ್ನಿ ಸುರಕ್ಷತೆ ಒಳಗೊಂಡಂತೆ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುತ್ತಿರುವ ಬಗ್ಗೆ ಪರೀಕ್ಷಿಸಬೇಕು ಎಂದು ಹೇಳಿದರು.ಹೊಸದಾಗಿ ಪರವಾನಿಗೆ ನೀಡುವಾಗ ಪರೀಶೀಲನೆಗೆ ಸಂಬಂಧ ಪಟ್ಟ ಇಒ, ಅಗ್ನಿಶಾಮಕ ದಳದ ಉಪನಿರ್ದೇಶಕರು, ತಾಲೂಕು ಆರೋಗ್ಯಾಧಿಕಾರಿ, ಸ್ಥಳೀಯ ಆರಕ್ಷಕ ನಿರೀಕ್ಷಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರನ್ನು ಒಳಗೊಂಡ ಒಂದು ವಿಶೇಷ ತಂಡ ರಚಿಸಿ ನಡೆಸಬೇಕು ಎಂದರು.

ಮುಖ್ಯಮಂತ್ರಿಗಳು ಆಯವ್ಯಯದಲ್ಲಿ ರಾಜ್ಯದ ಜಾಲಾಶಯಗಳ ಹಿನ್ನೀರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲ ಕ್ರೀಡೆ ಮತ್ತು ಜಲಸಾಹಸ ಕ್ರೀಡೆಗಳನ್ನು ಯೋಜಿಸಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಘೋಷಿಸಿರುವ ಹಿನ್ನೆಲೆ ಜಿಲ್ಲೆಯಲ್ಲಿ 5 ಜಲಾ ಕ್ರೀಡೆಗೆ ಅನುಕೂಲಕರ ಜಾಗಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದು ಹೇಳಿದರು.ಜಿಲ್ಲೆಯ ನಾಗಮಂಗಲ ತಾಲೂಕಿನ ಮುಳುಕಟ್ಟೆ ಹಾಗೂ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಿರ್ಮಿಸಿರುವ ಯಾತ್ರಿನಿವಾಸ ಕಟ್ಟಡಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಲು ಯಾತ್ರಿಕರು ತಂಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ನೂತನ ಪ್ರವಾಸಿ ತಾಣಗಳು:

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ರಾಘವೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ನೂತನ ಪ್ರವಾಸಿ ತಾಣಗಳನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗುರುತಿಸಿರುವ ಎಲ್ಲಾ ತಾಣಗಳು ತನ್ನದೇ ಆದ ವಿಶೇಷ, ವಿಶಿಷ್ಟತೆ, ಮಹತ್ವವನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಸಾಮರ್ಥ್ಯ ಹೊಂದಿದೆ ಎಂದರು.ಮಂಡ್ಯ- 12, ಮಳವಳ್ಳಿ- 11, ಮದ್ದೂರು- 18, ಶ್ರೀರಂಗಪಟ್ಟಣ - 24, ಪಾಂಡವಪುರ -13, ನಾಗಮಂಗಲ -10, ಕೆ ಆರ್ ಪೇಟೆ -18 ಸೇರಿದಂತೆ ಒಟ್ಟು -106 ನೂತನ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಜಿಲ್ಲಾ ಕುಟುಂಬ ಮತ್ತು ಆರೋಗ್ಯ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ನಂದೀಶ್, ನಿರ್ಮಿತಿ ಕೇಂದ್ರದ ಜಯ ಪ್ರಕಾಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.--------

17ಕೆಎಂಎನ್ ಡಿ23

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''