ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಸುರಕ್ಷತಾ ಕ್ರಮ ಕೈಗೊಳ್ಳಿ
ಸಾರ್ವಜನಿಕರು, ರೈತರು ಮನೆಯಿಂದ ಹೊರಗಡೆ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಒಡಾಡುವಾಗ ಶೂ ಗಳನ್ನು ಧರಿಸುವುದು, ಕೋಲು ಬಳಕೆ ಮೂಲಕ ಶಬ್ದ ಮಾಡಿಕೊಂಡು ನೆಡೆಯುವುದು ಸೇರಿದಂತೆ ಇನ್ನಿತರ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಇಷ್ಟೆಲ್ಲ ಕ್ರಮಗಳ ಮಧ್ಯಯು ಹಾವು ಕಡಿತಕ್ಕೆ ಒಳಪಟ್ಟರೆ ತಕ್ಷಣವೆ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಔಷೋದೋಪಚಾರ ಮಾಡಿಸಿಕೊಳ್ಳಬೇಕು ಎಂದರು.ಹಾವು ಕಡಿತಕ್ಕೆ ಔಶಧ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಸದಾಕಾಲ ಲಭ್ಯವಿರುತ್ತದೆ. ನಾಟಿ ಔಷದಿ ಬಳಕೆ ಮಾಡುವುದು ಹಾಗೂ ಸ್ವ ಚಿಕಿತ್ಸೆ ಮಾಡಿಕೊಳ್ಳೂವುದನ್ನು ಬಿಟ್ಟು ಆರೋಗ್ಯ ಇಲಾಖೆಯ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವುದರಿಂದ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ತಿಳಿಸಿದರು.
ನಾಯಿ ಕಡಿತಕ್ಕೆ ಚಿಕಿತ್ಸೆ ಪಡೆಯಿರಿರೇಬೀಸ್ ಕಾಯಿಲೆಯು ಮಾರಾಣಾಂತಿಕ ಕಾಯಿಲೆಯಾಗಿದ್ದು, ನಾಯಿ ಕಡಿತಕ್ಕೆ ಒಳಗಾದ ಕೂಡಲೆ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಚುಚ್ಚು ಮದ್ದು ಪಡೆಯುವುದು ಕಡ್ಡಾಯವಾಗಿರುತ್ತದೆ ಅಲ್ಲದೆ ವೈದ್ಯರು ಸೂಚಿಸಿದ ಪ್ರಕಾರವೇ ಆರೋಗ್ಯ ಚಿಕಿತ್ಸೆ ಪಡೆಯುವುದು ಅತಿ ಮುಖ್ಯವಾಗುತ್ತದೆ.ಒಮ್ಮೆ ರೇಬೀಸ್ ಕಾಯಿಲೆ ಬಂದರೆ ಗುಣಪಡಿಸಲು ಸಾಧ್ಯವಿಲ್ಲ. ಇದನ್ನು ಅರಿತು ಕೊಂಡು ಯಾವುದೇ ವ್ಯಕ್ತಿಗಳು ನಾಯಿ ಕಡಿತಕ್ಕೆ ಒಳಗಾದರೆ ಕೂಡಲೆ ಆರೋಗ್ಯ ಚಿಕಿತ್ಸೆ ಪಡೆಯಬೇಕು ಎಂದರು.
ಜಿಲ್ಲೆಯಲ್ಲಿ 2022 ರಲ್ಲಿ 7279 ಜನರು ನಾಯಿ ಕಡಿತಕ್ಕೆ ಒಳಗಾಗಿ 3 ಜನರು ಸಾವನ್ನಪ್ಪಿರುತ್ತಾರೆ. 2023 ರಲ್ಲಿ 8605 ಜನರು ನಾಯಿ ಕಡಿತಕ್ಕೆ ಒಳಪಟ್ಟು 3 ಜನರು ಸಾವನ್ನಪ್ಪಿರುತ್ತಾರೆ, ಹಾಗೂ 2024 ನವೆಂಬರ್ ವರೆಗೆ 9715 ಜನರು ನಾಯಿ ಕಡಿತಕ್ಕೆ ಒಳಪಟ್ಟು ಒಬ್ಬರು ಸಾವನ್ನಪ್ಪಿರುತ್ತಾರೆ. ವರ್ಷದಿಂದ ವರ್ಷಕ್ಕೆ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ ಎಂದರು. ಜಂತುಹುಳು ಮಾತ್ರೆ ನೀಡಿಒಂದು ವರ್ಷ ಮೇಲ್ಪಟ್ಟು ಹಾಗೂ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿರ್ಮೂಲನೆ ಮಾಡುವ ಮಾತ್ರೆ ತಿನ್ನಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಸಾರ್ವಜನಿಕರು, ಆರೋಗ್ಯ ಇಲಾಖೆಯ ಸಮನ್ವಯತೆಯೊಂದಿಗೆ ಮಕ್ಕಳ ಆರೋಗ್ಯ ಪಾಲನೆಗೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಇದೇ ತಿಂಗಳ 9 ರಂದು ರಾಷ್ಟ್ರಿಯ ಜಂತುಹುಳ ನಿರ್ಮೂಲನ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲು ಕ್ರಮ ಕೈಗೊಳ್ಳಲು ಸೂಚಿಸಿದರು. ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್ ಮಹೇಶ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕೃಷ್ಣ ಪ್ರಸಾದ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಸಂತೋಷ್ ಬಾಬು, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಉಮಾ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಶಿವಕುಮಾರ್, ಡಾ ರವಿ ಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.