ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಪಂ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಗ್ರಾಪಂಗಳಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ನಿಯಮಿತವಾಗಿ ಜರುಗಿಸಬೇಕು. ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆ ಗ್ರಾಪಂಗಳ ಮೂಲ ಕರ್ತವ್ಯವಾಗಿದೆ. ಗ್ರಾಪಂಗಳ ಚುನಾಯಿತ ಸದಸ್ಯರು ವಿಶೇಷ ಮುತುವರ್ಜಿ ವಹಿಸಿ ಗ್ರಾಮಗಳ ಸ್ವಚ್ಛತೆಗೆ ಗಮನ ಹರಿಸಲು ತಿಳಿಸಿದರು. ಗ್ರಾಮಗಳ ನೈರ್ಮಲ್ಯ ಕಾಪಾಡುವುದು ಗ್ರಾಪಂಗಳ ಕರ್ತವ್ಯವಾಗಿದ್ದು ಈ ಕುರಿತು ಗ್ರಾಮಗಳಲ್ಲಿ ಜಾಗೃತಿ ಮೂಡಿಸುವುದರ ಮೂಲಕ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಅಲ್ಲದೇ ಗ್ರಾಮಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಬೇಕು ಎಂದರು.ಗ್ರಾಮಗಳಲ್ಲಿ ಸರಬರಾಜು ಆಗುವ ಕುಡಿಯುವ ನೀರಿನ ಪರೀಕ್ಷೆ ನಿಯಮಿತವಾಗಿ ಜರುಗಿಸಬೇಕು. ಈ ಬಾರಿ ಮಳೆ ಹೆಚ್ಚಾಗುವ ಸಂಭವವಿದ್ದು ಎಲ್ಲ ಗ್ರಾಪಂಗಳ ಚರಂಡಿಗಳ ಸ್ವಚ್ಛಗೊಳಿಸಲು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಗಮನಹರಿಸಬೇಕು. ಗ್ರಾಪಂಗಳಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣಾ ನೀತಿಯನ್ನು ಅಳವಡಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಮುಂದಾಗುವಂತೆ ಅವರು ತಿಳಿಸಿದರು.ಸಭೆಯಲ್ಲಿ ಜಿಪಂ ಯೋಜನಾ ನಿರ್ದೆಶಕ ರವಿ ಬಂಗಾರಪ್ಪನವರ, ಗ್ರಾ. ಕು.ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಾಂಡುರಂಗ ರಾವ್, ಶಶಿಕಾಂತ ನಾಯಕ, ಮಾರಿಹಾಳ ಗ್ರಾಪಂ ಅಧ್ಯಕ್ಷ ಆಸೀಫ್ ಮುಲ್ಲಾ, ಬಸಾಪುರ ಗ್ರಾಪಂ ಅಧ್ಯಕ್ಷ ಭೀಮಶಿ ಕಲಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.